ಕಾರ್ಕಳ: ಖಾಸಗಿ ಬಸ್ಸು-ಕಾರು ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು
ಉಡುಪಿ ಜಿಲ್ಲೆಯ ಕಾರ್ಕಳ ಬಳಿ ಶನಿವಾರ ನಸುಕಿನ ಜಾವ ಖಾಸಗಿ ಬಸ್ಸು ಮತ್ತು ಕಾರಿನ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.
Published: 10th December 2022 11:33 AM | Last Updated: 10th December 2022 05:22 PM | A+A A-

ಅಪಘಾತ ನಂತರದ ದೃಶ್ಯ
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಬಳಿ ಶನಿವಾರ ನಸುಕಿನ ಜಾವ ಖಾಸಗಿ ಬಸ್ಸು ಮತ್ತು ಕಾರಿನ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.
ಕಾರ್ಕಳ ಬಜಗೋಳಿ ಸಮೀಪ ನೆಲ್ಲಿಕಾರು ಎಂಬಲ್ಲಿ ದುರಂತ ಸಂಭವಿಸಿದ್ದು, ಮೃತರನ್ನು ಆಂಧ್ರ ಪ್ರದೇಶ ಮೂಲದ ನಾಗರಾಜ್ ಅವರ ಪತ್ನಿ ಪ್ರತ್ಯುಷಾ ಹಾಗೂ ಎರಡು ವರ್ಷದ ಮಗು ಎಂದು ಗುರುತಿಸಲಾಗಿದೆ. ಇವರು ಮೂವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ದುರಂತ ಸಂಭವಿಸಿದೆ.
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.