ಗುಜರಾತ್ ಚುನಾವಣಾ ಫಲಿತಾಂಶ ಕರ್ನಾಟಕದಲ್ಲೂ ಪುನರಾವರ್ತಿತವಾಗಲಿದೆ: ಸಿಎಂ ಬಸವರಾಜ ಬೊಮ್ಮಾಯಿ
ಗುಜರಾತ್ ರಾಜ್ಯದ ಚುನಾವಣಾ ಫಲಿತಾಂಶ ಕರ್ನಾಟಕದಲ್ಲೂ ಪುನರಾವರ್ತಿತವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದ್ದಾರೆ.
Published: 12th December 2022 01:31 PM | Last Updated: 12th December 2022 01:31 PM | A+A A-

ಸಿಎಂ ಬೊಮ್ಮಾಯಿ
ಬೆಂಗಳೂರು: ಗುಜರಾತ್ ರಾಜ್ಯದ ಚುನಾವಣಾ ಫಲಿತಾಂಶ ಕರ್ನಾಟಕದಲ್ಲೂ ಪುನರಾವರ್ತಿತವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದ್ದಾರೆ.
ಗುಜರಾತ್ ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಬಿಜೆಪಿಯ ಭೂಪೇಂದ್ರ ಪಟೇಲ್ ಅವರು ಇಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿಎಂ ಬೊಮ್ಮಾಯಿ ಗುಜರಾತ್ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.
ಇದನ್ನೂ ಓದಿ: ಸತತ 2ನೇ ಅವಧಿಗೆ ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ಇಂದು ಪ್ರಮಾಣವಚನ: ಬಿಎಸ್'ವೈ, ಸಿಎಂ ಬೊಮ್ಮಾಯಿ ಭಾಗಿ
ಗುಜರಾತ್ ರಾಜ್ಯಕ್ಕೆ ಭೇಟಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಗುಜರಾತ್ ರಾಜ್ಯ ಚುನಾವಣಾ ಫಲಿತಾಂಶ ಕರ್ನಾಟಕದಲ್ಲು ಪುನರಾವರ್ತಿತವಾಗಲಿದೆ. ಗುಜರಾತ್‌ನ ವಿಜಯವು ನೀವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದರೆ ಅಧಿಕಾರದ ಪರವಾಗಬಹುದು ಎಂಬ ಸಂದೇಶವನ್ನು ಎಲ್ಲಾ ರಾಜ್ಯ ಸರ್ಕಾರಗಳಿಗೆ ರವಾನಿಸುತ್ತದೆ ಎಂದು ಹೇಳಿದ್ದಾರೆ.
ಇದೇ ವೇಳೆ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಕುರಿತ ಪ್ರಶ್ನೆಗೆ ಉತ್ತರಿಸಿ, ಡಿಸೆಂಬರ್ 14ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎರಡೂ ರಾಜ್ಯಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರು.