ನೈತಿಕ ಪೊಲೀಸ್ ಗಿರಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಜರಂಗ ದಳದ ನಾಲ್ವರು ಕಾರ್ಯಕರ್ತರ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭಜರಂಗ ದಳಕ್ಕೆ ಸೇರಿದ ನಾಲ್ವರು ಕಾರ್ಯಕರ್ತರನ್ನು ಬಂಧಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭಜರಂಗ ದಳಕ್ಕೆ ಸೇರಿದ ನಾಲ್ವರು ಕಾರ್ಯಕರ್ತರನ್ನು ಬಂಧಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಬಂಧಿತ ಹಿಂದೂ ಕಾರ್ಯಕರ್ತರನ್ನು ಕಂಕನಾಡು ಮೂಲದ ಚೇತನ್ ಕುಮಾರ್ (39), ಕಂಕನಾಡಿಯ ಪ್ರಕಾಶ್ (34), ಜೆಪ್ಪಿನಮೊಗರು ನಿವಾಸಿ ಶಿಬಿನ್ ಪಡಿಕಲ್ (36) ಮತ್ತು ಅತ್ತಾವರ ನಿವಾಸಿ 35 ವರ್ಷದ ಗಣೇಶ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಆರೋಪಿಗಳು ಡಿಸೆಂಬರ್ 6 ರಂದು ಆಭರಣ ಅಂಗಡಿಗೆ ನುಗ್ಗಿ ಅನ್ಯ ಧರ್ಮದ ಯುವಕನ ಮೇಲೆ ಹಲ್ಲೆ ನಡೆಸಿದ್ದರು.

ಯುವಕನಿಗೆ ಹಿಂದೂ ಸಹೋದ್ಯೋಗಿಯೊಂದಿಗೆ ಸಂಬಂಧವಿದೆ ಮತ್ತು 'ಲವ್ ಜಿಹಾದ್' ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಮಂಗಳೂರು ನಗರದ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸ್ ಸಿಬ್ಬಂದಿಯ ಸಮ್ಮುಖದಲ್ಲಿಯೇ ಗುಂಪು ಯುವಕನನ್ನು ಎಳೆದೊಯ್ದು ಥಳಿಸಿದೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಹಲ್ಲೆಗೊಳಗಾದ ಬಾಲಕನಿಂದ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಕದ್ರಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಮುಂದಿನ ತನಿಖೆ ನಡೆಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com