ತುಮಕೂರಿನಲ್ಲಿ ಕ್ಯಾಂಟರ್-ಕಾರು ನಡುವೆ ಭೀಕರ ಅಪಘಾತ: ನಾಲ್ವರ ದುರ್ಮರಣ!
ಕಾರು ಹಾಗೂ ಕ್ಯಾಂಟರ್ ನಡುವೆ ಸಂಭಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕೊಂಡ್ಲಿ ಕ್ರಾಸ್ ಬಳಿ ಸಂಭವಿಸಿದೆ.
Published: 14th December 2022 04:55 PM | Last Updated: 14th December 2022 05:33 PM | A+A A-

ಸಾಂದರ್ಭಿಕ ಚಿತ್ರ
ತುಮಕೂರು: ಕಾರು ಹಾಗೂ ಕ್ಯಾಂಟರ್ ನಡುವೆ ಸಂಭಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕೊಂಡ್ಲಿ ಕ್ರಾಸ್ ಬಳಿ ಸಂಭವಿಸಿದೆ.
ಕ್ಯಾಂಟರ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದರೆ ಮತ್ತೊಬ್ಬರು ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಚಿಕನ್ ರೋಲ್ ಕೊಟ್ಟಿಲ್ಲ ಎಂದು ಹೋಟೆಲ್ ಸಿಬ್ಬಂದಿ ಕೋಣೆಗೆ ಬೆಂಕಿ ಹಚ್ಚಿದ ಕಿಡಿಕೇಡಿಗಳು!
ಮೃತರನ್ನು 50 ವರ್ಷದ ನಾರಾಯಣಪ್ಪ, 45 ವರ್ಷದ ನಾಗರತ್ನ, 25 ವರ್ಷದ ರಾಜಣ್ಣ ಹಾಗೂ 25 ವರ್ಷದ ಸಾಗರ್ ಎಂದು ಗುರುತಿಸಲಾಗಿದೆ. ಮೃತರು ಚಿಕ್ಕನಾಯಕನಹಳ್ಳಿ ತಾಲೂಕಿನ ನಡುವಿನಹಳ್ಳಿ ಗ್ರಾಮದವರಾಗಿದ್ದು ಬೆಂಗಳೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೃತರ ದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.