ಮಾಜಿ ಐಪಿಎಸ್ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಸರ್ಕಾರ ಒಪ್ಪಿಗೆ

ಭಾರತೀಯ ಪೊಲೀಸ್ ಸೇವೆ (IPS) ಮಾಜಿ ಅಧಿಕಾರಿ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಭಾಸ್ಕರ್ ರಾವ್ ಅವರ ಸ್ವಯಂ ನಿವೃತ್ತಿ ಕೊನೆಗೂ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.
ಭಾಸ್ಕರ್ ರಾವ್
ಭಾಸ್ಕರ್ ರಾವ್

ಬೆಂಗಳೂರು: ಭಾರತೀಯ ಪೊಲೀಸ್ ಸೇವೆ (IPS) ಮಾಜಿ ಅಧಿಕಾರಿ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಭಾಸ್ಕರ್ ರಾವ್ ಅವರ ಸ್ವಯಂ ನಿವೃತ್ತಿ ಕೊನೆಗೂ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.

ಡಿಸೆಂಬರ್ 13 ರ ದಿನಾಂಕದ ಸರ್ಕಾರಿ ಅಧಿಸೂಚನೆಯಲ್ಲಿ, ಸಕ್ಷಮ ಪ್ರಾಧಿಕಾರವು ಅಖಿಲ ಭಾರತ ಸೇವೆಗಳ 9 (ಡಿಸಿಆರ್‌ಬಿ) ನಿಯಮಗಳು, ಐಪಿಎಸ್ 1958 ರ ನಿಯಮ 16(2) ರ ಅಡಿಯಲ್ಲಿ ರಾವ್ ಅವರ ಸ್ವಯಂ ನಿವೃತ್ತಿ ನಿರ್ಧಾರವನ್ನು ಏಪ್ರಿಲ್ 2, 2022 ರಿಂದ ಜಾರಿಗೆ ಬರುವಂತೆ ಸ್ವೀಕರಿಸಲಾಗಿದೆ ಎಂದು ಹೇಳಿದೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಅರ್ಜಿ ಸಲ್ಲಿಸಿದ್ದ ರಾವ್ ಅವರ ವಿಆರ್‌ಎಸ್ ಅನ್ನು ಸರ್ಕಾರ ಇನ್ನೂ ಅನುಮೋದಿಸಿಲ್ಲ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದ ನಂತರ ಸರ್ಕಾರದಿಂದ ಈ ಅಧಿಸೂಚನೆ ಬಂದಿದೆ.

ಮಾಜಿ ಐಪಿಎಸ್ ಅಧಿಕಾರಿ ಕರ್ನಾಟಕದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಹಾಲಿ ಉಪಾಧ್ಯಕ್ಷರಾಗಿದ್ದಾರೆ, ಮೂರು ದಶಕಗಳಿಗೂ ಹೆಚ್ಚು ಕಾಲ ಸರ್ಕಾರದಲ್ಲಿ ಸೇವೆ ಸಲ್ಲಿಸಿ ನಂತರ ಈ ವರ್ಷದ ಏಪ್ರಿಲ್‌ ತಿಂಗಳಿನಲ್ಲಿ ಆಮ್ ಆದ್ಮಿ ಪಕ್ಷ ಸೇರಿದ್ದರು. ರಾವ್ ಅವರನ್ನು ಜೂನ್‌ನಲ್ಲಿ ಕರ್ನಾಟಕದ ಎಎಪಿ ಉಪಾಧ್ಯಕ್ಷರನ್ನಾಗಿ ನೇಮಿಸಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com