ನೈತಿಕ ಪೊಲೀಸ್ ಗಿರಿ: ಬಸ್ ನಲ್ಲಿ ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಗೆ ಥಳಿತ!

ಬಸ್ಸಿನಲ್ಲಿ ಬಾಲಕಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ಮೇಲೆ ಮೂವರು ಅಪರಿಚಿತ ವ್ಯಕ್ತಿಗಳು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಬುಧವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಂಗಳೂರು: ಬಸ್ಸಿನಲ್ಲಿ ಬಾಲಕಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ಮೇಲೆ ಮೂವರು ಅಪರಿಚಿತ ವ್ಯಕ್ತಿಗಳು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಬುಧವಾರ ನಡೆದಿದೆ.

ಈ ಸಂಬಂಧ ಕಟ್ಟಡ ಕಾರ್ಮಿಕ ಇಸಾಕ್ (43) ಎಂಬವರು ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ

ಬಿ-ಮೂಡ ಗ್ರಾಮದ ನಿವಾಸಿಯಾಗಿರುವ ಇಸಾಕ್, ಬುಧವಾರ ಬೆಳಗ್ಗೆ ಮೂಡುಬಿದಿರೆಯಿಂದ ತಮ್ಮ ಕೆಲಸದ ಸ್ಥಳಕ್ಕೆ ತೆರಳಲು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬ ನನ್ನ ಹತ್ತಿರ ಬಂದು ಬಸ್‌ನಲ್ಲಿದ್ದ ಹುಡುಗಿಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದೇನೆಂದು ಆರೋಪಿಸಿ ನಿಂದಿಸಿದರು.

ಬಳಿಕ ಚಲಿಸುತ್ತಿದ್ದ ಬಸ್ ನಿಂದ ನನ್ನನ್ನು ತಳ್ಳಲು ಯತ್ನಿಸಿದ. ಈ ವೇಳೆ ಚಾಲಕ ಬಸ್ ನಿಲ್ಲಿಸಿದರ. ನಂತರ ಆತನೊಂದಿಗೆ ಇನ್ನಿಬ್ಬರು ಸೇರಿಕೊಂಡು ಹಲ್ಲೆ ನಡೆಸಿದರು. ನಂತರ ಆಟೋರಿಕ್ಷಾದಲ್ಲಿ ಕರೆದುಕೊಂಡು ಹೋಗಿ ದೊಣ್ಣೆಗಳಿಂದ ಥಳಿಸಿ ಕೊಲೆ ಬೆದರಿಕೆ ಹಾಕಿದರು.

ಈ ವೇಳೆ ಸ್ಥಳದಲ್ಲಿ ಜನರು ಸೇರಲು ಆರಂಭಿಸಿದಾಗ, ಅಲ್ಲಿಂದ ಪರಾರಿಯಾದರು ಎಂದು ದೂರಿನಲ್ಲಿ ಇಸಾಕ್ ಹೇಳಿಕೊಂಡಿದ್ದಾರೆ.

ನಂತರ ಮನೆಗೆ ತೆರಳಿದ ಐಸಾಕ್ ಅವರನ್ನು, ಗುರುವಾರ ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಈ ನಡುವೆ ಇಸಾಕ್ ಅವರು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಗೆ ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಅವರು ಭೇಟಿ ನೀಡಿದ್ದು, ಆರೋಗ್ಯ ವಿಚಾರಿಸಿದರು. ಇದೇ ವೇಳೆ ಮೂವರು ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಪೊಲೀಸರಿಗೆ ಒತ್ತಾಯಿಸಿದರು.

ಇಸಾಕ್ ಹುಡುಗಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದರೆ, ಅವರು ಅವನನ್ನು ಪೊಲೀಸರಿಗೆ ಒಪ್ಪಿಸಬೇಕಿತ್ತು ಎಂದು ತಿಳಿಸಿದರು.

ಆರೋಪಿಗಳ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಳೆದ ಒಂದು ತಿಂಗಳಿನಿಂದ ಮಂಗಳೂರಿನಲ್ಲಿ ನಡೆಯುತ್ತಿರುವ ನಾಲ್ಕನೇ ನೈತಿಕ ಪೊಲೀಸ್‌ಗಿರಿ ಪ್ರಕರಣ ಇದಾಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com