ರಾಯಚೂರು: ಕುರ್ ಕುರೇ ಪ್ಯಾಕೆಟ್ ನಲ್ಲಿ 500 ರು ಮುಖಬೆಲೆಯ ನೋಟುಗಳು: ಖರೀದಿಸಲು ಮುಗಿಬಿದ್ದ ಜನ!

ಇಲ್ಲಿ ಮಾರಾಟವಾದ 5 ರೂ. ಬೆಲೆಯ ಪ್ಯಾಕೆಟ್ ಗಳಲ್ಲಿ ರೂ. 500 ಮುಖಬೆಲೆಯ ಕರೆನ್ಸಿ ನೋಟುಗಳು ದೊರಕಿವೆ. ಒಬ್ಬ ಗ್ರಾಹಕನಿಗೆ 5-6 ಮತ್ತೊಬ್ಬನಿಗೆ 2-3 ನೋಟುಗಳು ಸಿಕ್ಕಿವೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಾಯಚೂರು: ಮಕ್ಕಳು ಬಹಳ ಇಷ್ಟಪಟ್ಟು ತಿನ್ನುವ ರೆಡಿಮೇಡ್ ಅಥವಾ ಅಂಗಡಿಗಳಲ್ಲಿ ಸಿಗುವ ಸ್ನ್ಯಾಕ್ಸ್ ಗಳಲ್ಲಿ ಕುರ್ಕುರೆ ಒಂದು. ಈ ಸ್ನ್ಯಾಕ್ಸ್ ಪ್ಯಾಕೆಟ್ ಗಳಿಗೆ ಸಂಬಂಧಿಸಿದಂತೆ ರಾಯಚೂರು ಲಿಂಗಸೂಗೂರು ತಾಲ್ಲೂಕಿನ ಹುನೂರು ಗ್ರಾಮದಲ್ಲಿ ಒಂದು ವಿಚಿತ್ರ ಹಾಗೂ ಆಶ್ಚರ್ಯಕರ ಸಂಗತಿ ಜರುಗಿದೆ.

ಇಲ್ಲಿ ಮಾರಾಟವಾದ 5 ರೂ. ಬೆಲೆಯ ಪ್ಯಾಕೆಟ್ ಗಳಲ್ಲಿ ರೂ. 500 ಮುಖಬೆಲೆಯ ಕರೆನ್ಸಿ ನೋಟುಗಳು ದೊರಕಿವೆ. ಒಬ್ಬ ಗ್ರಾಹಕನಿಗೆ 5-6 ಮತ್ತೊಬ್ಬನಿಗೆ 2-3 ನೋಟುಗಳು ಸಿಕ್ಕಿವೆ. ಈ ಸುದ್ದಿ ಊರಲ್ಲೆಲ್ಲ ಹಬ್ಬುತ್ತಿದ್ದಂತೆ ಜನ ಮುಗಿಬಿದ್ದು ಕುರ್ಕುರೆ ಪೊಟ್ಟಣಗಳನ್ನು ಖರೀದಿಸಿದ್ದಾರೆ. ಅಂಗಡಿಯಲ್ಲಿ ಸ್ಟಾಕ್ ಖಾಲಿಯಾಗಿದೆ, ಮಾಲೀಕ ಪುನಃ ಸ್ಟಾಕ್ ತರಿಸಿದಾಗ ಅವುಗಳಲ್ಲಿ ನೋಟು ಸಿಕ್ಕಿಲ್ಲ.

ಈ ನೋಟುಗಳು ಅಸಲಿಯೋ, ಖೋಟಾ ನೋಟುಗಳೋ ಅಂತ ಇನ್ನಷ್ಟೇ ಪತ್ತೆಯಾಗಬೇಕು. ಮುದ್ಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com