ಚೆಕ್ ಬೌನ್ಸ್ ಪ್ರಕರಣದಲ್ಲಿ ಶಾಸಕ ಕೆವೈ ನಂಜೇಗೌಡ ತಪ್ಪಿತಸ್ಥ: ಬರೋಬ್ಬರಿ 49.65 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್!
ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಲೂರು ಶಾಸಕ ಕೆ.ವೈ ನಂಜೇಗೌಡ ತಪ್ಪಿತಸ್ಥ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದ್ದು ಇದೇ ವೇಳೆ 49.65 ಲಕ್ಷ ದಂಡ ವಿಧಿಸಿದೆ.
Published: 17th December 2022 03:24 PM | Last Updated: 17th December 2022 03:37 PM | A+A A-

ಕೆವೈ ನಂಜೇಗೌಡ
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಲೂರು ಶಾಸಕ ಕೆ.ವೈ ನಂಜೇಗೌಡ ತಪ್ಪಿತಸ್ಥ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದ್ದು ಇದೇ ವೇಳೆ 49.65 ಲಕ್ಷ ದಂಡ ವಿಧಿಸಿದೆ.
ರಾಮಚಂದ್ರ ಜಿ ಎಂಬುವರಿಂದ ನಂಜೇಗೌಡ ಅವರು 40 ಲಕ್ಷ ರೂಪಾಯಿ ಸಾಲ ಮರುಪಾವತಿಗೆ ಚೆಕ್ ನೀಡಿದ್ದರು. ಆದರೆ ಚೆಕ್ ಬೌನ್ಸ್ ಆಗಿದ್ದರಿಂದ ಅವರನ್ನು ತಪ್ಪಿತಸ್ಥ ಎಂದು ಕೋರ್ಟ್ ತೀರ್ಪು ನೀಡಿದೆ.
ಇದೇ ವೇಳೆ ದಂಡ ಪಾವತಿಸದಿದ್ದರೆ 6 ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕು ಎಂದು 42ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.