
ವಿಧಾನಸೌಧ
ಬೆಂಗಳೂರು: ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರಾಗಿದ್ದ ಕೆ.ಎ.ದಯಾನಂದ ಅವರನ್ನು ಮತ್ತೆ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಶ್ರೀನಿವಾಸ್ ಅವರು ಅಮಾನತುಗೊಂಡಿದ್ದಾರೆ. ಅವರಿಂದ ತೆರವಾದ ಸ್ಥಾನಕ್ಕೆ ಸರ್ಕಾರ ಹೊಸಬರನ್ನು ನೇಮಕ ಮಾಡಿರಲಿಲ್ಲ. ಇಂದು ಸರ್ಕಾರ ಕೆ.ಎ.ದಯಾನಂದ ಅವರನ್ನು ನೇಮಕ ಮಾಡಿದೆ.
ಇದನ್ನು ಓದಿ: ಮತದಾರರ ಮಾಹಿತಿ ಕಳವು ಪ್ರಕರಣ: ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ
ಕೆ.ಎ.ದಯಾನಂದ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ 2ನೇ ಸಲ ನೇಮಕವಾಗಿದ್ದಾರೆ. ಈ ಹಿಂದೆ ವಿಪಕ್ಷನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗಲೂ ದಯಾನಂದ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದರು.