ಮಹಾರಾಷ್ಟ್ರ ಸಚಿವ ಶಂಭುರಾಜ್ ದೇಸಾಯಿ.
ಮಹಾರಾಷ್ಟ್ರ ಸಚಿವ ಶಂಭುರಾಜ್ ದೇಸಾಯಿ.

ಗಡಿ ವಿವಾದ: ನಾಗ್ಪುರ ಅಧಿವೇಶನದ ಬಳಿಕ ಬೆಳಗಾವಿಗೆ ಭೇಟಿ ನೀಡುತ್ತೇವೆ: ಮಹಾರಾಷ್ಟ್ರ ಸಚಿವರು

ಕರ್ನಾಟಕದ ಬೆಳಗಾವಿಯಲ್ಲಿ ಮತ್ತು ಮಹಾರಾಷ್ಟ್ರದ ನಾಗ್ಪುರದಲ್ಲಿ ಚಳಿಗಾಲದ ಅಧಿವೇಶನಗಳು ಪೂರ್ಣಗೊಂಡ ನಂತರ ಬೆಳಗಾವಿಗೆ ಭೇಟಿ ನೀಡುತ್ತೇವೆಂದು ಮಹಾರಾಷ್ಟ್ರ ಸಚಿವರು ಹೇಳಿದ್ದಾರೆ.
Published on

ಬೆಳಗಾವಿ: ಕರ್ನಾಟಕದ ಬೆಳಗಾವಿಯಲ್ಲಿ ಮತ್ತು ಮಹಾರಾಷ್ಟ್ರದ ನಾಗ್ಪುರದಲ್ಲಿ ಚಳಿಗಾಲದ ಅಧಿವೇಶನಗಳು ಪೂರ್ಣಗೊಂಡ ನಂತರ ಬೆಳಗಾವಿಗೆ ಭೇಟಿ ನೀಡುತ್ತೇವೆಂದು ಮಹಾರಾಷ್ಟ್ರ ಸಚಿವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ಸಚಿವ ಶಂಭುರಾಜ್ ದೇಸಾಯಿ ಅವರು, ಉಭಯ ರಾಜ್ಯಗಳ ಅಧಿವೇಶನದ ಬಳಿಕ ಬೆಳಗಾವಿಗೆ ಭೇಟಿ ನೀಡಿ ಮಹಾರಾಷ್ಟ್ರ ಪರ ನಾಯಕರನ್ನು ಭೇಟಿ ಮಾಡುತ್ತೇವೆಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನಿಯೋಗಕ್ಕೆ ಭರವಸೆ ನೀಡಿದರು.

ಬೆಳಗಾವಿ ಭೇಟಿ ವೇಳೆ ಮಹಾರಾಷ್ಟ್ರದ ಮತ್ತೋರ್ವ ಸಚಿವ ಚಂದ್ರಕಾಂತ್ ಪಾಟೀಲ್ ಅವರೂ ಕೂಡ ನಮ್ಮ ಜೊತೆಗೂಡಲಿದ್ದಾರೆಂದು ತಿಳಿಸಿದರು. ಅಧಿಕೃತ ಭೇಟಿ ಕುರಿತು ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡುವುದಾಗಿ ದೇಸಾಯಿ ಹೇಳಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ ನಂತರ ಕರ್ನಾಟಕ ಸರ್ಕಾರದ ವರ್ತನೆಯಲ್ಲಿ ಕೆಲವು ಸಕಾರಾತ್ಮಕ ಬದಲಾವಣೆಗಳಾಗಿವೆ ಎಂದು ಅವರು ಹೇಳಿದರು.

ಬೆಳಗಾವಿಗೆ ಭೇಟಿ ನೀಡುವ ಮೊದಲು ದೇಸಾಯಿ ಮತ್ತು ಪಾಟೀಲ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೊಂದಿಗೆ ವಿವರವಾದ ಚರ್ಚೆ ನಡೆಸುವುದಾಗಿ ಹೇಳಿದರು.

ಶುಕ್ರವಾರ ಸಂಜೆ ಕರ್ನಾಟಕದ ಗಡಿಭಾಗದಲ್ಲಿರುವ ಮಹಾರಾಷ್ಟ್ರದ ಸಿನೋಲಿ ಗ್ರಾಮಕ್ಕೆ ಭೇಟಿ ನೀಡಿದ ಎಂಇಎಸ್ ನಿಯೋಗದೊಂದಿಗೆ ದೇಸಾಯಿ ಅವರು ಮಾತುಕತೆ ನಡೆಸಿದರು.

ವಿಕಾಸ ಕಲಘಟಗಿ ನೇತೃತ್ವದ ಎಂಇಎಸ್ ನಿಯೋಗ ಗಡಿ ವಿವಾದದ ಕುರಿತು ದೇಸಾಯಿ ಅವರನ್ನು ಭೇಟಿ ಮಾಡಿತು.

ಗಡಿ ವಿವಾದದಿಂದ ತೀವ್ರ ಸಮಸ್ಯೆ ಎದುರಿಸುತ್ತಿರುವ ಮಹಾರಾಷ್ಟ್ರ ಪರ ಹೋರಾಟಗಾರರಿಗೆ ಸಹಾಯವಾಣಿ ಸ್ಥಾಪಿಸುವಂತೆ ಇದೇ ವೇಳೆ ಎಂಇಎಸ್‌ನ ಕೆಲವು ಸದಸ್ಯರು ಸಚಿವರನ್ನು ಒತ್ತಾಯಿಸಿದರು.

ಡಿಸೆಂಬರ್ 19 ರಂದು ಕರ್ನಾಟಕ ಮತ್ತು ಮಹಾರಾಷ್ಟ್ರದ ಚಳಿಗಾಲದ ಅಧಿವೇಶನಗಳು ಏಕಕಾಲದಲ್ಲಿ ನಡೆಯಲಿದ್ದು, ಮಹಾರಾಷ್ಟ್ರದ ಎಲ್ಲಾ ಸಚಿವರು ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com