ಮಂಗಳೂರು ಸ್ಫೋಟ ಪ್ರಕರಣ: ಆರೋಪಿ ಶಾರೀಖ್ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಖ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಆರೋಪಿ ಶಾರೀಕ್
ಆರೋಪಿ ಶಾರೀಕ್

ಬೆಂಗಳೂರು/ಮಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಖ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ನಾಗೂರಿನಲ್ಲಿ ಸಂಭವಿಸಿದ ಸ್ಫೋಟದ ನಂತರ ಶಾರೀಖ್ ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ವೈದ್ಯರು ಮತ್ತು ಅಧಿಕಾರಿಗಳ ಶಿಫಾರಸಿನ ಮೇರೆಗೆ ಶಾರೀಖ್ ನನ್ನು ಶನಿವಾರ ಬೆಳಗ್ಗೆ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದ್ದಾರೆ.

ಸ್ಫೋಟದ ಬಳಿಕ ಶಾರೀಖ್'ಗೆ ಶೇ.45 ರಷ್ಟು ಸುಟ್ಟ ಗಾಯಗಳಾಗಿದ್ದು, ಆರೋಗ್ಯ ಸ್ಥಿತಿ ಸುಧಾರಿಸಿದ ಬಳಿಕ ಆತನನ್ನು ವಿಚಾರಣೆಗೊಳಪಡಿಸಲು ಅಧಿಕಾರಿಗಳು ಕಾದುಕುಳಿತಿದ್ದಾರೆ.

ಶಾರೀಖ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಎನ್ಐಎ ಅಧಿಕಾರಿಗಳು, ಶೀಘ್ರದಲ್ಲೇ ಆತನನ್ನು ವಿಚಾರಣೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ವಿಕ್ಟೋರಿಯಾ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜರಿ ಮತ್ತು ಸುಟ್ಟಗಾಯಗಳ ವಿಭಾಗದ ಮುಖ್ಯಸ್ಥ ಡಾ ಕೆ ಟಿ ರಮೇಶ್ ಅವರು ಮಾತನಾಡಿ, “ಮೊಹಮ್ಮದ್ ಶಾರೀಖ್ ಅವರನ್ನು ಶನಿವಾರ ಬೆಳಿಗ್ಗೆ ಸುಟ್ಟಗಾಯಗಳ ವಾರ್ಡ್‌ಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಮತ್ತು ಇಲ್ಲಿಯವರೆಗೆ ನೀಡಿದ ಚಿಕಿತ್ಸೆ ನಂತರ ಮುಂದಿನ ಚಿಕಿತ್ಸೆಯನ್ನು ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ. ಈ ಸಂಬಂಧ ಹೆಚ್ಚಿನ ವಿವರಗಳ ನೀಡಲು ಡಾ ರಮೇಶ್ ನಿರಾಕರಿಸಿದ್ದಾರೆ. ಈ ನಡುವ ಆಸ್ಪತ್ರೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com