ಬೆಳಗಾವಿ ಚಳಿಗಾಲ ಅಧಿವೇಶನ: ಸಾವರ್ಕರ್ ಫೋಟೋ ಅನಾವರಣಕ್ಕೆ ಬಿಜೆಪಿ ಸಿದ್ಧತೆ, ಸರ್ಕಾರ-ಕಾಂಗ್ರೆಸ್ ತೀವ್ರ ಜಟಾಪಟಿ ಸಾಧ್ಯತೆ

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಅಧಿವೇಶನದ ವೇಳೆ ಸಾವರ್ಕರ್ ಫೋಟೋ ಅನಾವರಣ ಮಾಡಲು ಬಿಜೆಪಿ ಸರ್ಕಾರ ಸಿದ್ಧತೆ ನಡೆಸಿದೆ.ಈ ಹಿನ್ನೆಲೆಯಲ್ಲಿ ಸದನದಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ನಡುವೆ ತೀವ್ರ ಜಟಾಪಟಿ ನಡೆಯುವ ಸಾಧ್ಯತೆಗಳಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಳಗಾವಿ: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಅಧಿವೇಶನದ ವೇಳೆ ಸಾವರ್ಕರ್ ಫೋಟೋ ಅನಾವರಣ ಮಾಡಲು ಬಿಜೆಪಿ ಸರ್ಕಾರ ಸಿದ್ಧತೆ ನಡೆಸಿದೆ.ಈ ಹಿನ್ನೆಲೆಯಲ್ಲಿ ಸದನದಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ನಡುವೆ ತೀವ್ರ ಜಟಾಪಟಿ ನಡೆಯುವ ಸಾಧ್ಯತೆಗಳಿವೆ.

ಸೋಮವಾರ ನಡೆಯಲಿರುವ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಅವರ ಭಾವಚಿತ್ರಗಳ ಅನಾವರಣ ಕಾರ್ಯಕ್ರಮಕ್ಕೆ ತಮ್ಮನ್ನು ಆಹ್ವಾನಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕರು ತಿಳಿಸಿದ್ದಾರೆ.

ಸಭಾಂಗಣದಲ್ಲಿ ಸಾವರ್ಕರ್ ಸೇರಿದಂತೆ ಏಳು ಭಾವಚಿತ್ರಗಳನ್ನು ಅನಾವರಣಗೊಳಿಸಲು ಸರ್ಕಾರ ವ್ಯವಸ್ಥೆ ಮಾಡಿದೆ ಎಂದು ವರದಿಯಾಗಿದೆ.

ಗಾಂಧಿ ಮತ್ತು ಅಂಬೇಡ್ಕರ್ ಭಾವಚಿತ್ರ ಅನಾವರಣಕ್ಕೆ ಆಹ್ವಾನ ನೀಡಿರುವುದು ಸಂತಸ ತಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಆದರೆ, ವಿಧಾನಸಭೆಯಲ್ಲಿ ಯಾರ ಭಾವಚಿತ್ರ ಅಳವಡಿಸಲಾಗಿದೆ ಎಂಬುದನ್ನು ನೋಡಿದ ನಂತರವೇ ಮುಂದಿನ ನಡೆಯನ್ನು ನಿರ್ಧರಿಸಲಾಗುವುದು ಎಂದಿದ್ದಾರೆ.

ಈ ನಡುವೆ ಸಿದ್ದರಾಮಯ್ಯ ಅವರು ಸಾವರ್ಕರ್ ಅವರನ್ನು (ನಾಥುರಾಮ್ ಗೋಡ್ಸೆ ಬದಲಿಗೆ) ಗಾಂಧಿ ಹಂತಕ ಎಂದು ಕರೆದಿದ್ದಾರೆ.

ಈಗ ಸದನದಲ್ಲಿ ಸಾವರ್ಕರ್ ಭಾವಚಿತ್ರ ಏಕೆ? ಅದರ ಅಗತ್ಯವೂ ಇಲ್ಲ. ಸಾವರ್ಕರ್ ಅವರದ್ದು ವಿವಾದಾತ್ಮಕ ವ್ಯಕ್ತಿತ್ವವಾಗಿದೆ. ಈ ಕಾರ್ಯಕ್ರಮಕ್ಕೆ ನನಗೆ ಯಾವುದೇ ಆಹ್ವಾನ ಬಂದಿಲ್ಲ ಎಂದಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮಾತನಾಡಿ, ಈ ರೀತಿ ಆಗಬಹುದು ಎಂದು ನಿರೀಕ್ಷಿಸಿರಲಿಲ್ಲ. ಈ ಬಗ್ಗೆ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com