ಮಂಗಳೂರು ವಿ.ವಿ ಫಲಿತಾಂಶ ವಿಳಂಬ: 500ಕ್ಕೂ ಹೆಚ್ಚು ಎಬಿವಿಪಿ ಕಾರ್ಯಕರ್ತರಿಂದ ಮುತ್ತಿಗೆ

ಮಂಗಳೂರು ವಿಶ್ವವಿದ್ಯಾಲಯ ಫಲಿತಾಂಶ ವಿಳಂಬದ ವಿರುದ್ಧ ಎಬಿವಿಪಿ ಕಾರ್ಯಕರ್ತರು ತೀವ್ರ ಆಕ್ರೋಶಗೊಂಡು, ವಿವಿ ಸಿಂಡಿಕೇಟ್ ನುಗ್ಗಲು ಯತ್ನಿಸಿದ ಘಟನೆ ನಡೆದಿದೆ.  ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನಿಸಿದ ವೇಳೆ ಪೊಲೀಸರು-ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ ನಡೆದಿದೆ. 
ಪೊಲೀಸರು ಮತ್ತು ಎಬಿವಿಪಿ ಕಾರ್ಯಕರ್ತರ ನಡುವೆ ತಳ್ಳಾಟ
ಪೊಲೀಸರು ಮತ್ತು ಎಬಿವಿಪಿ ಕಾರ್ಯಕರ್ತರ ನಡುವೆ ತಳ್ಳಾಟ

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಫಲಿತಾಂಶ ವಿಳಂಬದ ವಿರುದ್ಧ ಎಬಿವಿಪಿ ಕಾರ್ಯಕರ್ತರು ತೀವ್ರ ಆಕ್ರೋಶಗೊಂಡು, ವಿವಿ ಸಿಂಡಿಕೇಟ್ ನುಗ್ಗಲು ಯತ್ನಿಸಿದ ಘಟನೆ ನಡೆದಿದೆ.  ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನಿಸಿದ ವೇಳೆ ಪೊಲೀಸರು-ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ ನಡೆದಿದೆ. 

ಮಂಗಳೂರು ವಿ.ವಿ ಫಲಿತಾಂಶ ವಿಳಂಬ ಪ್ರಶ್ನಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮಂಗಳೂರಿನ ಕೊಣಾಜೆಯಲ್ಲಿರುವ ವಿವಿಯ ಆಡಳಿತ ಸೌಧಕ್ಕೆ 500ಕ್ಕೂ ಹೆಚ್ಚು ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. 

ಮಂಗಳೂರು ವಿವಿ ಆಡಳಿತ ಸೌಧದ ಆವರಣಕ್ಕೆ ಬಂದಾಗ ಪೊಲೀಸರು ತಡೆದಿದ್ದು, ಈ ವೇಳೆ ಎಬಿವಿಪಿ ಕಾರ್ಯಕರ್ತರು ಬ್ಯಾರಿಕೇಡ್ ಗಳನ್ನು ತಳ್ಳಿ ನುಗ್ಗಲು ಯತ್ನಿಸಿದ್ದಾರೆ. ಬಳಿಕ ವಿ.ವಿ ಪರೀಕ್ಷಾಂಗ ಕುಲಸಚಿವ ಪ್ರೊ.ಪಿ.ಎಲ್ ಧರ್ಮ ಮತ್ತು ಕುಲಪತಿ ಪಿ.ಎಸ್ ಯಡಪಡಿತ್ತಾಯ ಆಗಮಿಸಿದ್ದು, ಈ ವೇಳೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ವಿ.ವಿ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡದೆ ಸತಾಯಿಸುತ್ತಿದ್ದು, ಅಂಕಪಟ್ಟಿ ಬಾರದೇ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲಾಗದೇ ಸಮಸ್ಯೆ ಎದುರಾಗಿದೆ.

ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡದೆ ಸತಾಯಿಸುತ್ತಿರುವುದು, ಅಂಕಪಟ್ಟಿ ಬಾರದೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲು ಅವಕಾಶ ಸಿಗದಿರುವುದು, ಮೌಲ್ಯಮಾಪನ ವನ್ನು ಸೂಕ್ತ ಸಮಯದಲ್ಲಿ ನಡೆಸದಿರುವುದು ಇವೆಲ್ಲ ಸಮಸ್ಯೆಗಳು ಒಂದು ಕಡೆಯಾದರೆ, ಎನ್‌ಇಪಿ ಜಾರಿಯಾದ ನಂತರ ಮೊದಲನೇ ವರ್ಷಕ್ಕೆ ಸೇರ್ಪಡೆಯಾದ ವಿದ್ಯಾರ್ಥಿಗಳು ಪ್ರಸ್ತುತ ದ್ವಿತೀಯ ವರ್ಷದಲ್ಲಿ ಇದ್ದರೂ ಸಹ ಪ್ರಥಮ ಹಾಗೂ ದ್ವಿತೀಯ ಸೆಮಿಸ್ಟರ್ ನ ಮೌಲ್ಯಮಾಪನವನ್ನು ನಡೆಸಿ ಫಲಿತಾಂಶವನ್ನು ಈವರೆಗೂ ನೀಡದೆ ಮಂಗಳೂರು ವಿವಿ ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಚೆಲ್ಲಾಟವಾಡುತ್ತಿದೆ. 

ಈ ಎಲ್ಲ ಸಮಸ್ಯೆಗಳಿಗೆ ಮಂಗಳೂರು ವಿವಿಯ ಕುಲಪತಿ ಹಾಗೂ ಪರೀಕ್ಷಾಂಗ ಕುಲಸಚಿವರು ಕಾರಣ ಎಂದು ವಿದ್ಯಾರ್ಥಿಗಳು ಆರೋಪಿಸಿದರು. 

ವಿದ್ಯಾರ್ಥಿಗಳು ವಾಸ್ತವ ಅರ್ಥಮಾಡಿಕೊಂಡಿಲ್ಲ. ಒಂದು ದಿನ ಸಿಎಲ್ ಹಾಕದೆ ನನ್ನ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಯುಸಿಎಂಎಸ್ ನದ್ದೇ ನಮಗೆ ಸಮಸ್ಯೆ ಆಗಿರೋದು. ಸರ್ವರ್ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸರಕಾರದ ವಿರುದ್ಧ ನಾನು ಮಾತನಾಡುತ್ತಿಲ್ಲ, ವ್ಯವಸ್ಥೆ ವಿರುದ್ಧ ಮಾತನಾಡುತ್ತಿದ್ದೇನೆ. ವಿವಿ ವಿದ್ಯಾರ್ಥಿಗಳಿಗೆ ಸಹಾಯವೇ ಮಾಡಿದೆ. ಜನವರಿ 25ರ ಒಳಗಡೆ ಫಲಿತಾಂಶ ಪ್ರಕಟಣೆಗೆ ಎಲ್ಲ ವ್ಯವಸ್ಥೆ ಮಾಡುತ್ತೇವೆ ಎಂದು ಪರೀಕ್ಷಾಂಗ ಕುಲಸಚಿವರ ಭರವಸೆಯ ಮೇರೆಗೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ಹಿಂಪಡೆದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com