ಬೆಂಗಳೂರು: ಒಂದೇ ಕುಟುಂಬದ ಮೂವರ ಆತ್ಮಹತ್ಯೆ; ವಿಷ ಸೇವಿಸಿ ಮಕ್ಕಳ ಜೊತೆ ತಾಯಿ ಸಾವಿಗೆ ಶರಣು!

ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದಿದೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದಿದೆ.

ಯಶೋಧಾ(70), ಸುಮನ್(41), ನರೇಶ್ ಗುಪ್ತಾ(36) ಎಂಬ ತಾಯಿ, ಮಗಳು ಹಾಗೂ ಮಗ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೇಲ್ನೋಟಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.  ಮಹಾಲಕ್ಷ್ಮೀ ಲೇಔಟ್​​ನ ಮನೆಯೊಂದರಲ್ಲಿ ವಾಸವಾಗಿದ್ದ ತಾಯಿ, ಮಗಳು ಹಾಗೂ ಮಗ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.  ಮಹಾಲಕ್ಷ್ಮಿ ಲೇಔಟ್​​​ನ ವೆಸ್ಟ್ ಆಪ್ ಕಾರ್ಡ್ ರಸ್ತೆಯಲ್ಲಿರುವ ಅಪಾರ್ಟ್​​ಮೆಂಟ್​​ನಲ್ಲಿ ಈ ಘಟನೆ ನಡೆದಿದೆ.

ಮೃತ ತಾಯಿ ಯಶೋಧಾರಿಗೆ ಮೂವರು ಮಕ್ಕಳಿದ್ದಾರೆ. ಈ ಪೈಕಿ ಒಬ್ಬ ಮಗಳು ಮದುವೆ ಆಗಿ ರಾಜಾಜಿನಗರದಲ್ಲಿ ನೆಲೆಸಿದ್ದಾಳೆ. ಮಗ ನರೇಶ್​, ಮತ್ತೋರ್ವ ಪುತ್ರಿ ಸುಮನ್ ತಾಯಿ ಯಶೋಧಾ ಜತೆ ನೆಲೆಸಿದ್ದರು. ಮೃತ ನರೇಶ್ ವೃತ್ತಿಯಲ್ಲಿ ಕಾಂಟ್ರಾಕ್ಟರ್ ಆಗಿದ್ದ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಯಶೋಧರಿಗೆ ಸಂಬಂಧಿಕರು ಹಲವು ಬಾರಿ ಕರೆ ಮಾಡಿದ್ದು ಅವರು ಸ್ವೀಕರಿಸಿಲ್ಲ. ಈ ಹಿನ್ನಲೆ ಸಂಬಂಧಿಕರು ರಾಜಾಜಿನಗರದಲ್ಲಿರುವ 2ನೇ ಮಗಳಿಗೆ ಕಾಲ್ ಮಾಡಿ ತಿಳಿಸಿದ್ದಾರೆ. ನಂತರ ಮನೆ ಬಳಿ ಬಂದಾಗ ಚಪ್ಪಲಿ, ಕಾರ್ ಇರುವುದು ಪತ್ತೆಯಾಗಿದೆ. ಬಳಿಕ ಮನೆ ಒಳಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮಗಳು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಸ್ಥಳಕ್ಕೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com