ಮತದಾರರ ಪಟ್ಟಿಗೆ ತೃತೀಯಲಿಂಗಿಗಳನ್ನು ಸೇರ್ಪೆಡೆಗೊಳಿಸಿ: ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಸೂಚನೆ

18 ವರ್ಷ ಮೇಲ್ಪಟ್ಟ ತೃತೀಯಲಿಂಗಿ ಹಾಗೂ ವಿಕಲಚೇತನರನ್ನು ಗುರುತಿಸಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಂಗಳವಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು: 18 ವರ್ಷ ಮೇಲ್ಪಟ್ಟ ತೃತೀಯಲಿಂಗಿ ಹಾಗೂ ವಿಕಲಚೇತನರನ್ನು ಗುರುತಿಸಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಂಗಳವಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಮಂಗಳವಾರ ನಡೆದ ವಿಶೇಷ ಸಭೆಯಲ್ಲಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತರು, ತೃತೀಯಲಿಂಗಿಗಳ ಸಂಘಟನೆಗಳ ಸಹಾಯವನ್ನು ಪಡೆದುಕೊಂಡು ಇನ್ನೂ ನೋಂದಣಿಯಾಗದ ತೃತೀಯ ಲಿಂಗಿಗಳ ಪಟ್ಟಿಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕೆಲವು ಅಲ್ಪಸಂಖ್ಯಾತರನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವಲ್ಲಿ ತಾಂತ್ರಿಕ ಸಮಸ್ಯೆಗಳು ಕಂಡು ಬಂದಿದ್ದು, ವಿಳಾಸ ವಿವರಗಳು ಮತ್ತು ಜನ್ಮ ದಿನಾಂಕದಂತಹ ದಾಖಲೆಗಳು ಲಭ್ಯವಿಲ್ಲದ ಕಾರಣ, ಅಧಿಕಾರಿಗಳು ವಲಯ ಜಂಟಿ ಆಯುಕ್ತರೊಂದಿಗೆ ಸಮನ್ವಯ ಸಾಧಿಸಿ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ವಿಶೇಷ ಆಯುಕ್ತ (ಚುನಾವಣೆ) ಉಜ್ವಲ್ ಕುಮಾರ್ ಘೋಷ್ ಅವರು ಮಾತನಾಡಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಅಲ್ಪಸಂಖ್ಯಾತರು ಮತ್ತು ವಿಕಲಚೇತನರನ್ನು ಮತದಾರರಿಗೆ ಸೇರಿಸಲು ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಈ ಸಂಬಂಧ ಜಾಗೃತಿ ಮೂಡಿಸಬೇಕೆಂದು ತಿಳಿಸಿದರು.

ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯ ದಾಖಲೆಗಳ ಪ್ರಕಾರ, ನಗರದಲ್ಲಿ ಪ್ರಸ್ತುತ 9,182 ತೃತೀಯಲಿಂಗಿಗಳಿದ್ದು, ಅವರಲ್ಲಿ 9,085 ಮಂದಿ ಕಾರ್ಡ್'ಗಳನ್ನು ಹೊಂದಿದ್ದಾರೆ. ಉಳಿದವರಲ್ಲಿ 15 ಮಂದಿ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿದ್ದು, 82 ಮಂದಿಯನ್ನು ಸಂಪರ್ಕಿಸಬೇಕಾಗಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com