ಮಂಗಳೂರೂ ಸ್ಫೋಟ ಪ್ರಕರಣ: ಆರೋಪಿ ಶಾರೀಖ್ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾನೆ: ವಿಕ್ಟೋರಿಯಾ ಆಸ್ಪತ್ರೆ ವೈದ್ಯರು

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಂಗಳೂರಿನ ಆಟೋರಿಕ್ಷಾ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ (24) ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾನೆಂದು ಚಿಕಿತ್ಸೆ ನೀಡುತ್ತಿರುವ ವೈದ್ಯರು ಹೇಳಿದ್ದಾರೆ.
ಆರೋಪಿ ಶಾರೀಕ್
ಆರೋಪಿ ಶಾರೀಕ್

ಬೆಂಗಳೂರು: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಂಗಳೂರಿನ ಆಟೋರಿಕ್ಷಾ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ (24) ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾನೆಂದು ಚಿಕಿತ್ಸೆ ನೀಡುತ್ತಿರುವ ವೈದ್ಯರು ಹೇಳಿದ್ದಾರೆ..

ಹೆಚ್ಚಿನ ಚಿಕಿತ್ಸೆಗಾಗಿ ಆರೋಪಿ ಶಾರೀಖ್ ನನ್ನು ಡಿಸೆಂಬರ್ 17 ರಂದು ಮಂಗಳೂರಿನಿಂದ ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಆರೋಪಿಯ ದೇಹದಲ್ಲಾಗಿದ್ದ ಸುಟ್ಟಗಾಯಗಳು ವಾಸಿಯಾಗುತ್ತಿವೆ. ಪ್ಲಾಸ್ಟಿಕ್ ಸರ್ಜರಿಯ ಅಗತ್ಯವಿಲ್ಲ. “ಶಾರೀಖ್'ನನ್ನು ಶನಿವಾರ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾವು ಅವರ ಆರೋಗ್ಯವನ್ನು ಮೌಲ್ಯಮಾಪನ ಮಾಡಿದ್ದೇವೆ. ಮೊದಲು ಪಡೆಯುತ್ತಿದ್ದ ಚಿಕಿತ್ಸೆ ಮಾಹಿತಿ ಪಡೆದುಕೊಂಡು ನಂತರ ನಮ್ಮ ಚಿಕಿತ್ಸೆಯನ್ನು ಪ್ರಾರಂಭಿಸಿದೆವು ಎಂದು ವಿಕ್ಟೋರಿಯಾ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜರಿ ಮತ್ತು ಸುಟ್ಟಗಾಯಗಳ ವಿಭಾಗದ ಮುಖ್ಯಸ್ಥ ಡಾ.ಕೆ.ಟಿ ರಮೇಶ್ ಅವರು ಮಾಹಿತಿ ನೀಡಿದ್ದಾರೆ.

ನವೆಂಬರ್ 19 ರಂದು ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಆರೋಪಿ ಶಾರೀಖ್'ಗೆ ಶೇ.45 ಸುಟ್ಟಗಾಯಗಳಾಗಿದ್ದವು. ಆಟೋರಿಕ್ಷಾದ ಚಾಲಕ ಪುರುಷೋತ್ತಮ ಪೂಜಾರಿ ಎಂದು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಸದ್ಯಕ್ಕೆ ಶಾರೀಖ್"ಗೆ ಯಾವುದೇ ಪ್ಲಾಸ್ಟಿಕ್ ಸರ್ಜರಿ ಅಗತ್ಯವಿಲ್ಲ. ಆತ ನಮ್ಮ ಚಿಕಿತ್ಸೆಗೆ ಉತ್ತಮವಾಗಿ ಪ್ರತಿಕ್ರಿಯಿಸುತ್ತಿದ್ದಾನೆ. ಸುಟ್ಟ ಗಾಯಗಳು ಚೆನ್ನಾಗಿ ವಾಸಿಯಾಗುತ್ತಿದ್ದು, ನಾವು ನಮ್ಮ ಚಿಕಿತ್ಸೆಯನ್ನು ಮುಂದುವರಿಸುತ್ತೇವೆ. ನಮ್ಮ ಸುಟ್ಟಗಾಯಗಳ ವಾರ್ಡ್‌ನಲ್ಲಿ ಇನ್ನೂ ಕೆಲವು ದಿನಗಳವರೆಗೆ ಆಸ್ಪತ್ರೆಯಲ್ಲಿ ಇರಬೇಕಾಗಬಹುದು ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com