ಗಡಿ ವಿವಾದ: ಮಹಾರಾಷ್ಟ್ರ ನಡೆ ವಿರುದ್ಧ ಖಂಡನಾ ನಿರ್ಣಯ, ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರ

ಮಹಾರಾಷ್ಟ್ರದ ಗಡಿ ವಿವಾದ ಖಂಡಿಸಿ ರಾಜ್ಯ ವಿಧಾನಸಭೆಯಲ್ಲಿ ಇಂದು ಸರ್ವಾನುಮತದಿಂದ ಖಂಡನಾ ನಿರ್ಣಯ ಅಂಗೀಕರಿಸಲಾಗಿದೆ. ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ ಖಂಡನಾ ನಿರ್ಣಯ ಸರ್ವಾನುಮತದಿಂದ ಅಂಗೀಕಾರವಾಯಿತು.
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ: ಮಹಾರಾಷ್ಟ್ರದ ಗಡಿ ವಿವಾದ ಖಂಡಿಸಿ ರಾಜ್ಯ ವಿಧಾನಸಭೆಯಲ್ಲಿ ಇಂದು ಸರ್ವಾನುಮತದಿಂದ ಖಂಡನಾ ನಿರ್ಣಯ ಅಂಗೀಕರಿಸಲಾಗಿದೆ. ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ ಖಂಡನಾ ನಿರ್ಣಯ ಸರ್ವಾನುಮತದಿಂದ ಅಂಗೀಕಾರವಾಯಿತು.

ನಂತರ ಮಾತನಾಡಿದ ಮುಖ್ಯಮಂತ್ರಿ,  ಕರ್ನಾಟಕದ ನೆಲ, ಜಲದ ಹಿತ ಕಾಪಾಡಲು ಮತ್ತು ಕಾನೂನಿನ ಹೋರಾಟದ ಸಮರ್ಥನೆ ಮಾಡಲು, ಈ ಮೂಲಕ ರಾಜ್ಯ ಸರ್ಕಾರ ತನ್ನ ಬದ್ದತೆಯನ್ನು ಪ್ರದರ್ಶಿಸಿದೆ. ಇತ್ತೀಚೆಗೆ ಈ ವಿಷಯದ ಬಗ್ಗೆ ಮಹಾರಾಷ್ಟ್ರದ ನಾಯಕರು ಕೊಡುತ್ತಿರುವ ಎಲ್ಲ ಹೇಳಿಕೆಗಳು ಅತ್ಯಂತ ಖಂಡನೀಯ ಎಂದರು. 

ಕರ್ನಾಟಕದ ನೆಲ, ಜಲ, ಭಾಷೆ ಹಾಗೂ ಕನ್ನಡಿಗರ ಹಿತಾಸಕ್ತಿಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಈ ವಿಷಯದಲ್ಲಿ ಕರ್ನಾಟಕದ ಜನರ ಮತ್ತು ಸದಸ್ಯರೆಲ್ಲರ ಭಾವನೆಯು ಒಂದೇ ಆಗಿದ್ದು, ಇದಕ್ಕೆ ಧಕ್ಕೆ ದಾಗ ಎಲ್ಲರೂ ಒಗ್ಗಟ್ಟಿನಿಂದ ರಾಜ್ಯದ ಹಿತಾಸಕ್ತಿ ಹಾಗೂ ರಕ್ಷಣೆಗೆ ಸಂವಿಧಾನಾತ್ಮಕ ಹಾಗೂ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಬದ್ಧರಿದ್ದೇವೆ ಎಂದು ಹಾಗೂ ಮಹಾರಾಷ್ಟ್ರದ ಜನತೆ ಅನಾವಶ್ಯಕವಾಗಿ ಸೃಷ್ಟಿಸಿರುವ ಗಡಿ ವಿವಾದವನ್ನು ಖಂಡಿಸಿ, ರಾಜ್ಯದ ಹಿತರಕ್ಷಣೆಗೆ ಕಟಿಬದ್ಧರಾಗಿರುವುದಾಗಿ ನಿರ್ಣಯ ಕೈಗೊಳ್ಳಲಾಗಿದೆ. 

 ಖಂಡನಾ ನಿರ್ಣಯವನ್ನು ಸಭಾಧ್ಯಕ್ಷರು ಮತಕ್ಕೆ ಹಾಕಿದರು. ನಂತರ ಸದನ ಸರ್ವಾನುಮತದಿಂದ ಅದನ್ನು ಅಂಗೀಕರಿಸಿತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com