ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ವಿವಿ ಸ್ಥಾಪನೆ ಯೋಜನೆಗೆ ಭೂಮಿ ಸಮಸ್ಯೆ!

ಕರ್ನಾಟಕ ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪನೆ ಯೋಜನೆಗೆ ಭೂಮಿ ಸಮಸ್ಯೆ ಎದುರಾಗಿದೆ. ಅಗತ್ಯ ಭೂಮಿಯನ್ನು ಸಂಗ್ರಹಿಸುವಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಯೋಜನೆಗೆ ಅಡೆತಡೆ ಉಂಟಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಕರ್ನಾಟಕ ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪನೆ ಯೋಜನೆಗೆ ಭೂಮಿ ಸಮಸ್ಯೆ ಎದುರಾಗಿದೆ. ಅಗತ್ಯ ಭೂಮಿಯನ್ನು ಸಂಗ್ರಹಿಸುವಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಯೋಜನೆಗೆ ಅಡೆತಡೆ ಉಂಟಾಗಿದೆ ಎಂದು ತಿಳಿದುಬಂದಿದೆ.

ಈ ವರ್ಷದ ಆರಂಭದಲ್ಲಿಯೇ ಬೆಂಗಳೂರಿನ ಯಲಹಂಕದಲ್ಲಿ ಯೋಜನೆ ಆರಂಭಿಸಲು ಸರ್ಕಾರ ಮುಂದಾಗಿತ್ತು. ಬೆಂಗಳೂರು ಹೊರವಲಯದ ಯಲಹಂಕದಲ್ಲಿ 100 ಎಕರೆ ಜಾಗವನ್ನು ಕ್ರೀಡಾ ಇಲಾಖೆ ಗುರುತಿಸಿತ್ತು. ಇದರಲ್ಲಿ 65 ಎಕರೆ ರಾಜ್ಯ ಸರ್ಕಾರಕ್ಕೆ ಸೇರಿದ್ದು, ಉಳಿದ 35 ಎಕರೆಯನ್ನು ಖಾಸಗಿಯವರಿಂದ ಪಡೆಯಬೇಕಿದೆ. 65 ಎಕರೆ ಕಂದಾಯ ಇಲಾಖೆಗೆ ಸೇರಿದ್ದಾಗಿದೆ.

ಈ ಭೂಮಿಗೆ ಅನುಮತಿ ಕೋರಿ ಕಂದಾಯ ಇಲಾಖೆಗೆ ಪತ್ರ ಬರೆದಿದ್ದೇವೆ. ಇದಕ್ಕೆ ಅಧಿಕಾರಿಗಳು ಅನುಮತಿ ನೀಡಿದ ಬಳಿಕ ಅನುಮೋದನೆಗಾಗಿ ಸಂಪುಟದ ಮುಂದೆ ಇಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ, ಇದು ಸರಕಾರದ ಪ್ರತಿಷ್ಠಿತ ಯೋಜನೆಯಾಗಿದೆ. ಯೋಜನೆಯಲ್ಲಿ ಕ್ರೀಡಾಪಟುಗಳಿಗೆ ತರಬೇತಿ, ಕಾಲೇಜು ಮತ್ತು ವಸತಿ ಸೌಲಭ್ಯಗಳನ್ನು ಒಳಗೊಂಡಂತೆ ಎಲ್ಲಾ ಸೌಕರ್ಯಗಳು ಇರಲಿದೆ. ಬಹುತೇಕ ಭೂಮಿ ಸರ್ಕಾರಕ್ಕೆ ಸೇರಿರುವುದರಿಂದ ಇಲ್ಲಿ ಭೂ ಸ್ವಾಧೀನದ ಸಮಸ್ಯೆಯಾಗುವುದಿಲ್ಲ ಎಂದು ಹೇಳಿದ್ದಾರೆ.

ಸ್ವಾಧೀನಪಡಿಸಿಕೊಳ್ಳಬೇಕಾದ ಖಾಸಗಿ ಭೂಮಿ ಕಡಿಮೆಯಾಗಿದೆ. ಈ ಸಮಸ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗುವುದು, ಇದರಿಂದ ಯೋಜನೆಯು ಶೀಘ್ರವಾಗಿ ಪ್ರಾರಂಭವಾಗಲಿದೆ. "ಈ ವಿಶ್ವವಿದ್ಯಾಲಯವು ಅನೇಕ ಮಹತ್ವಾಕಾಂಕ್ಷಿ ಕ್ರೀಡಾಪಟುಗಳಿಗೆ ಸಹಾಯ ಮಾಡಲಿದೆ ಎಂದು ತಿಳಿಸಿದ್ದಾರೆ.

ಬಹುತೇಕ ಸರಕಾರಿ ಯೋಜನೆಗಳು ಖಾಸಗಿಯವರ ಪಾಲಾಗಿರುವುದರಿಂದ ಭೂ ಸ್ವಾಧೀನ ಪ್ರಕ್ರಿಯೆ ವಿಳಂಬವಾಗುತ್ತಿದೆ ಎಂದು ಕ್ರೀಡಾ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಭೂಮಿ ಸರ್ಕಾರಿ ಭೂಮಿಯಾಗಿದ್ದರೂ ಕಂದಾಯ ಇಲಾಖೆ ವಿಳಂಬ ಮಾಡುತ್ತಿದೆ. ಕಂದಾಯ ಇಲಾಖೆ ಒಪ್ಪಿಗೆ ನೀಡದ ಹೊರತು ಅದನ್ನು ಸಂಪುಟದ ಮುಂದೆ ಇಡಲು ಸಾಧ್ಯವಾಗುವುದಿಲ್ಲ. ಇಷ್ಟೊತ್ತಿಗಾಗಲೇ ಜಮೀನು ಸ್ವಾಧೀನ ಪಡಿಸಿಕೊಳ್ಳಬೇಕಾಗಿತ್ತು, ಆದರೆ, ಅದು ಸಾಧ್ಯವಾಗಿಲ್ಲ. ಮುಖ್ಯಮಂತ್ರಿಗಳು ಅದನ್ನು ಬಜೆಟ್‌ನಲ್ಲಿ ಘೋಷಿಸುತ್ತಾರೆಂಬ ವಿಶ್ವಾಸವಿದೆ ಎಂದಿದ್ದಾರೆ.

ಈ ಹಿಂದೆ ಹೇಳಿಕೆ ನೀಡಿದ್ದ ಕ್ರೀಡಾ ಸಚಿವ ನಾರಾಯಣ ಗೌಡ ಅವರು, ಕೇಂದ್ರ ಸರ್ಕಾರದ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ಕೇಂದ್ರವೂ ಯೋಜನೆಗೆ ಅನುದಾನ ನೀಡುವ ನಿರೀಕ್ಷೆಯಲ್ಲಿದ್ದೇನೆ ಎಂದು ಹೇಳಿದ್ದರು.

Related Stories

No stories found.

Advertisement

X
Kannada Prabha
www.kannadaprabha.com