ಬೆಂಗಳೂರು ಮೈಸೂರು ದಶಪಥ ರಸ್ತೆಗೆ 'ಕಾವೇರಿ ಎಕ್ಸ್‌ಪ್ರೆಸ್‌ವೇ' ಎಂದು ಹೆಸರಿಡಲು ​ಗಡ್ಕರಿಗೆ ಪ್ರತಾಪ್ ಸಿಂಹ ಮನವಿ

ಯಮುನಾ ಎಕ್ಸ್​​ಪ್ರೆಸ್​ವೇ, ಗಂಗಾ ಎಕ್ಸ್​​ಪ್ರೆಸ್​ವೇ, ಮಧ್ಯಪ್ರದೇಶದ ನರ್ಮದಾ ಎಕ್ಸ್​ಪ್ರೆಸ್​ವೇ ನಂತೆಯೇ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಜೀವನದಿ ಕಾವೇರಿ ನದಿಯ ಹೆಸರು ಇಡಬೇಕೆಂದು ಸಂಸದ ಪ್ರತಾಪ ಸಿಂಹ್​ ಅವರು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಬುಧವಾರ ಮನವಿ ಮಾಡಿದ್ದಾರೆ.
ಕೇಂದ್ರ ಸಚಿವರ ಭೇಟಿಯಾದ ಪ್ರತಾಪ್ ಸಿಂಹ.
ಕೇಂದ್ರ ಸಚಿವರ ಭೇಟಿಯಾದ ಪ್ರತಾಪ್ ಸಿಂಹ.
Updated on

ನವದೆಹಲಿ: ಯಮುನಾ ಎಕ್ಸ್​​ಪ್ರೆಸ್​ವೇ, ಗಂಗಾ ಎಕ್ಸ್​​ಪ್ರೆಸ್​ವೇ, ಮಧ್ಯಪ್ರದೇಶದ ನರ್ಮದಾ ಎಕ್ಸ್​ಪ್ರೆಸ್​ವೇ ನಂತೆಯೇ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಜೀವನದಿ ಕಾವೇರಿ ನದಿಯ ಹೆಸರು ಇಡಬೇಕೆಂದು ಸಂಸದ ಪ್ರತಾಪ ಸಿಂಹ್​ ಅವರು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಬುಧವಾರ ಮನವಿ ಮಾಡಿದ್ದಾರೆ.

ನಿನ್ನೆ ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿದ ಪ್ರತಾಪ್ ಸಿಂಹ ಅವರು, ಮೈಸೂರು-ಬೆಂಗಳೂರು ಹೈವೇಗೆ "ಕಾವೇರಿ ಎಕ್ಸ್ ಪ್ರೆಸ್ ವೇ" ಎಂದು ಹೆಸರಿಡುವಂತೆ ಮನವಿ ಮಾಡಿ, ಈ ಹೆಸರನ್ನು ಯಾವ ಕಾರಣಕ್ಕೆ ಇಡಬೇಕೆಂಬುದನ್ನೂ ವಿವರಿಸಿದರು.

“ಈಗಾಗಲೇ ಭಾಗಶಃ ತೆರೆಯಲಾದ 119 ಕಿಮೀ ಉದ್ದದ ದಶಪಥಗಳ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅನ್ನು ಭಾರತಮಾಲಾ ಪರಿಯೋಜನಾ ಹಂತ ಒಂದರ ಅಡಿಯಲ್ಲಿ ನಿರ್ಮಿಸಲಾಗಿದೆ. ಈ ಎಕ್ಸ್‌ಪ್ರೆಸ್‌ವೇಯಿಂದ ಹಲವು ರೀತಿಯ ಪ್ರಯೋಜನಗಳಿವೆ. ಆರ್ಥಿಕ ಬೆಳವಣಿಗೆ, ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಸಬಲೀಕರಣ, ಪರಿಸರ ಸಂರಕ್ಷಣೆ ಸೇರಿದಂತೆ ಉಭಯ ನಗರಗಳಿಗೆ ಬಹಳಷ್ಟು ಅನುಕೂಲ ಕಲ್ಪಿಸಲಿದೆ”.

ದೇಶಾದ್ಯಂತ ಅನೇಕ ಎಕ್ಸ್‌ಪ್ರೆಸ್‌ವೇಗಳಿಗೆ ಪವಿತ್ರ ನದಿಗಳ ಹೆಸರನ್ನು ಇಡಲಾಗಿದೆ. “ದೇಶದಲ್ಲಿ ನಿರ್ಮಿಸಲಾದ ಅಥವಾ ನಿರ್ಮಾಣ ಹಂತದಲ್ಲಿರುವ ಎಕ್ಸ್‌ಪ್ರೆಸ್‌ವೇಗಳಿಗೆ ಪವಿತ್ರ ನದಿಗಳಾದ ಯಮುನಾ ಎಕ್ಸ್‌ಪ್ರೆಸ್‌ವೇ ಮತ್ತು ಉತ್ತರ ಪ್ರದೇಶದ ಗಂಗಾ ಎಕ್ಸ್‌ಪ್ರೆಸ್‌ವೇ ಮತ್ತು ಮಧ್ಯಪ್ರದೇಶದ ನರ್ಮದಾ ಎಕ್ಸ್‌ಪ್ರೆಸ್‌ವೇಗಳ ಹೆಸರನ್ನು ಇಡಲಾಗಿದೆ. ಏಕೆಂದರೆ ನದಿಗಳು ನಮ್ಮ ದೇಶದ ಇತಿಹಾಸ, ಸಂಸ್ಕೃತಿ, ಸಂಪ್ರದಾಯಗಳು ಮತ್ತು ನಂಬಿಕೆಯನ್ನು ರೂಪಿಸಿವೆ,

ರಾಜ್ಯದ ಪ್ರಮುಖ ನಗರಗಳಾದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ನದಿಯ ಹೆಸರನ್ನು ಇಡುವಂತೆ ಅನೇಕ ಜನರು ಮತ್ತು ಇತಿಹಾಸಕಾರರು ತಮ್ಮಲ್ಲಿ ಮನವಿ ಮಾಡಿದ್ದಾರೆ ಎಂದು ಮೈಸೂರು ಸಂಸದರು ಹೇಳಿದರು.

ಪಶ್ಚಿಮಘಟ್ಟದ ಬ್ರಹ್ಮಗಿರಿ ಬೆಟ್ಟಗಳಲ್ಲಿ ಹುಟ್ಟುವ ದೇಶದ ಅತ್ಯಂತ ಪವಿತ್ರ ನದಿಗಳಲ್ಲಿ ಒಂದಾದ ಕಾವೇರಿ ನದಿಯ ಹೆಸರನ್ನು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಇಡಲು ಕೇಂದ್ರ ಸರ್ಕಾರವನ್ನು ಮೆಚ್ಚಿಸುವಂತೆ ಇತಿಹಾಸಕಾರರು ಸೇರಿದಂತೆ ನನ್ನ ಸಂಸದೀಯ ಕ್ಷೇತ್ರದ ಪ್ರಮುಖ ನಾಗರಿಕರು ನನ್ನನ್ನು ಒತ್ತಾಯಿಸಿದ್ದಾರೆ. ಈ ವಿಚಾರವಾಗಿ ಕೇಂದ್ರ ಸರ್ಕಾರ ಕೂಡಾ ಇದನ್ನೇ ಪ್ರಸ್ತಾಪಿಸುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಪ್ರತಾಪ್ ಸಿಂಹ ಅವರು ಕೇಂದ್ರ ಸಚಿವರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಬರೆದಿದ್ದಾರೆ.

119-ಕಿಮೀ ದಶಪಥದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಕೇವಲ 90 ನಿಮಿಷಗಳಿಗೆ ಇಳಿಸುವ ನಿರೀಕ್ಷೆಯಿದೆ. ಸದ್ಯ ಇವೆರಡು ನಗರದ ನಡುವಿನ ಸಂಚಾರ ಸಮಯ ಮೂರು ಗಂಟೆ ಹಿಡಿಯುತ್ತಿದೆ. ಕಾಮಗಾರಿ ಬಳಿಕ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ ಆಗಲಿದೆ ಎಂದು ಸಚಿವ ನಿತಿನ್ ಗಡ್ಕರಿ ಈ ಹಿಂದೆ ತಿಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com