ಅರಕಲಗೂಡಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ವಸತಿ ಶಾಲೆಯ ಪ್ರಾಂಶುಪಾಲರ ಬಂಧನ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅರಕಲಗೂಡಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ

ಹಾಸನ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅರಕಲಗೂಡಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಈ ಸಂಬಂಧ ಅರಕಲಗೂಡು ಪೊಲೀಸರು 51 ವರ್ಷದ ಶಿವಕುಮಾರ್ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (ಪೊಕ್ಸೊ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ನೀಡಿದ ದೂರಿನ ಮೇರೆಗೆ ಪೊಲೀಸರು ಶಾಲೆಗೆ ಧಾವಿಸಿದರು.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಎಚ್.ಡಿ. ಕೋಮಲಾ ಮಾತನಾಡಿ, ತಿಂಗಳ ಹಿಂದೆಯೂ ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿಗಳು ಇದೇ ರೀತಿ ದೂರು ನೀಡಿದ್ದರು ಎಂದಿದ್ದಾರೆ.

ಕೋಮಲಾ ನೇತೃತ್ವದ ಸಮಿತಿ ಸದಸ್ಯರು ವಸತಿ ಶಾಲೆಗೆ ತೆರಳಿ ಕೌನ್ಸೆಲಿಂಗ್ ನಡೆಸುವ ವೇಳೆ 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಪ್ರಾಂಶುಪಾಲರ ಅವ್ಯವಹಾರದ ಬಗ್ಗೆ ದೂರು ನೀಡಿದ್ದಾರೆ. ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಗೊತ್ತಿದ್ದರೂ ಪ್ರಾಂಶುಪಾಲರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ.

ಪ್ರಾಂಶುಪಾಲರು ಆಗಾಗ್ಗೆ ಹುಡುಗರನ್ನು ಅಶ್ಲೀಲ ಭಾಷೆಯಲ್ಲಿ ನಿಂದಿಸುತ್ತಾರೆ ಮತ್ತು ವಿದ್ಯಾರ್ಥಿನಿಯರೊಂದಿಗೆ ಅನಗತ್ಯ ವಿಚಾರಗಳ ಬಗ್ಗೆ ಮಾತನಾಡುತ್ತಿರುತ್ತಾರೆ ಎಂದು ದೂರಿನಲ್ಲಿ ಸದಸ್ಯರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಾಂಶುಪಾಲರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com