ಕೊಪ್ಪಳ; ಶಾಲಾ ಬಾಲಕಿ ಮೇಲೆ ಲೈಂಗಿಕ ಕಿರುಕುಳ ಎಸಗಿದ ವ್ಯಕ್ತಿ ಬಂಧನ, ಸಾಮೂಹಿಕ ಅತ್ಯಾಚಾರದ ಶಂಕೆ
ಕೊಪ್ಪಳ ಜಿಲ್ಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದ್ದು, ಸಂತ್ರಸ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಶಂಕೆ ಇದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
Published: 24th December 2022 01:12 PM | Last Updated: 24th December 2022 01:12 PM | A+A A-

ಪ್ರಾತಿನಿಧಿಕ ಚಿತ್ರ
ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದ್ದು, ಸಂತ್ರಸ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಶಂಕೆ ಇದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಬಾಲಕಿಯ ದೇಹದಲ್ಲಿ ಆದ ಬದಲಾವಣೆಗಳನ್ನು ಆಕೆಯ ಪೋಷಕರು ಗಮನಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ. ಹೆಚ್ಚಿನ ವೈದ್ಯಕೀಯ ಪರೀಕ್ಷೆಯಲ್ಲಿ ಆಕೆ ಆರು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ.
ಕುಟುಂಬ ಸದಸ್ಯರ ಹಿಂದೇಟು ಮತ್ತು ಸಾಮಾಜಿಕ ಕಳಂಕದ ಭಯದಿಂದ ಬಾಲಕಿ ಘಟನೆಯ ಬಗ್ಗೆ ಯಾವುದೇ ವಿವರವನ್ನು ಹಂಚಿಕೊಂಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಬಲವಂತದ ಧಾರ್ಮಿಕ ಮತಾಂತರ, ಅಪ್ರಾಪ್ತ ಬಾಲಕಿಯ ಅತ್ಯಾಚಾರ: ಕೊಪ್ಪಳದ ಪಾದ್ರಿಯ ವಿರುದ್ಧ ಎಫ್ ಐ ಆರ್
ಸಂತ್ರಸ್ತೆ ಮಾನಸಿಕ ಆಘಾತಕ್ಕೆ ಒಳಗಾಗಿರುವ ಕಾರಣ ಘಟನೆಯ ವಿವರಗಳನ್ನು ಹಂಚಿಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಸಂತ್ರಸ್ತೆ ಪೋಷಕರಿಗೆ ನೀಡಿದ ಸುಳಿವಿನಲ್ಲಿ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.