ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

40 ಪರ್ಸೆಂಟ್ ಭ್ರಷ್ಟಾಚಾರದ ಆರೋಪ: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಸೇರಿ ನಾಲ್ವರ ಬಂಧನ

ರಾಜ್ಯ ಸರ್ಕಾರದ ವಿರುದ್ಧ 40 ಪರ್ಸೆಂಟ್ ಭ್ರಷ್ಟಾಚಾರದ ಆರೋಪ ಮಾಡಿದ್ದ ರಾಜ್ಯ ಗುತ್ತಿಗೆದಾರರ ಸಂಘದ (ಕೆಎಸ್‌ಸಿಎ) ಅಧ್ಯಕ್ಷ ಡಿ. ಕೆಂಪಣ್ಣ ಮತ್ತು ಇತರ ಮೂವರನ್ನು ವೈಯಾಲಿಕಾವಲ್ ಪೊಲೀಸರು ಶನಿವಾರ ಮಧ್ಯಾಹ್ನ ಮಾನನಷ್ಟ ಮೊಕದ್ದಮೆ ಅಡಿಯಲ್ಲಿ ಬಂಧಿಸಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ 40 ಪರ್ಸೆಂಟ್ ಭ್ರಷ್ಟಾಚಾರದ ಆರೋಪ ಮಾಡಿದ್ದ ರಾಜ್ಯ ಗುತ್ತಿಗೆದಾರರ ಸಂಘದ (ಕೆಎಸ್‌ಸಿಎ) ಅಧ್ಯಕ್ಷ ಡಿ. ಕೆಂಪಣ್ಣ ಮತ್ತು ಇತರ ಮೂವರನ್ನು ವೈಯಾಲಿಕಾವಲ್ ಪೊಲೀಸರು ಶನಿವಾರ ಮಧ್ಯಾಹ್ನ ಮಾನನಷ್ಟ ಮೊಕದ್ದಮೆ ಅಡಿಯಲ್ಲಿ ಬಂಧಿಸಿದ್ದಾರೆ.

ಟೆಂಡರ್ ನೀಡಲು ಗುತ್ತಿಗೆದಾರರಿಂದ ಶೇ 40ರಷ್ಟು ಕಮಿಷನ್ ವಸೂಲಿ ಮಾಡಿದ್ದಾರೆ ಎಂಬ ಆರೋಪದ ವಿರುದ್ಧ ತೋಟಗಾರಿಕಾ ಸಚಿವ ಎನ್. ಮುನಿರತ್ನ ಅವರು ಕೆಂಪಣ್ಣ ಹಾಗೂ ಗುತ್ತಿಗೆದಾರರ ಸಂಘದ ಇತರ 18 ಸದಸ್ಯರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮುನಿರತ್ನ ಅವರು ತಮ್ಮ ಮಾನಹಾನಿ ಮಾಡಿದ್ದಕ್ಕಾಗಿ 50 ಕೋಟಿ ರೂ. ಪರಿಹಾರ ನೀಡುವಂತೆ ಕೋರಿ ಸೆಪ್ಟೆಂಬರ್ 1ರಂದು ಸಂಘಕ್ಕೆ ನೋಟಿಸ್ ಕಳುಹಿಸಿದ್ದರು.

19ರಂದು ಆದೇಶ ಹೊರಡಿಸಿದ ನ್ಯಾಯಾಲಯ

ನೋಟಿಸ್‌ಗೆ ಉತ್ತರಿಸಲು ಮತ್ತು ಸಾರ್ವಜನಿಕವಾಗಿ ಕ್ಷಮೆಯಾಚಿಸಲು ಅಥವಾ ತಮ್ಮ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಸಾಕ್ಷ್ಯವನ್ನು ನೀಡುವಂತೆ ಕೆಂಪಣ್ಣ ಮತ್ತು ಕೆಎಸ್‌ಸಿಎಗೆ ಅಂತಿಮ ಗಡುವು ನೀಡಿದ್ದರು. ಸಂಘವು ತನ್ನ ಯಾವುದೇ ಷರತ್ತುಗಳನ್ನು ಪೂರೈಸದ ಹಿನ್ನೆಲೆಯಲ್ಲಿ ಸಚಿವರು ವಿಚಾರಣಾ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ಮುನಿರತ್ನ ಅವರು ತನ್ನ ವಿರುದ್ಧ ಕೆಎಸ್‌ಸಿಎ ಯಾವುದೇ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ತಡೆಯಾಜ್ಞೆ ಆದೇಶವನ್ನೂ ತಂದಿದ್ದರು.

8ನೇ ಎಸಿಎಂಎಂ ನ್ಯಾಯಾಲಯ ಕೆಂಪಣ್ಣ ಹಾಗೂ ಇತರರ ವಿರುದ್ಧ ಡಿ.19ರಂದು ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ್ದು, ವೈಯಾಲಿಕಾವಲ್ ಪೊಲೀಸರು ಕೆಂಪಣ್ಣ, ನಟರಾಜ್, ಕೃಷ್ಣಾ ರೆಡ್ಡಿ, ಗುರುಸಿದ್ದಪ್ಪ ಎಂಬುವವರನ್ನು ಬಂಧಿಸಿದ್ದಾರೆ. ಈ ಬಗ್ಗೆ ಕೇಂದ್ರ ಡಿಸಿಪಿ ಆರ್ ಶ್ರೀನಿವಾಸ ಗೌಡ ಖಚಿತಪಡಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com