ಚಿಕ್ಕಬಳ್ಳಾಪುರ: ನಿರ್ಮಾಣ ಹಂತದ ಕಾಲೇಜು ಕಟ್ಟಡ ಕುಸಿತ; 9ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ

ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಗ್ರಾಮದ ಬಳಿ ನಿರ್ಮಾಣ ಹಂತದ ವೈದ್ಯಕೀಯ ಕಾಲೇಜು ಕಟ್ಟಡದ ಸ್ಲ್ಯಾಬ್​ ಕುಸಿದು ಬಿದ್ದು, 9ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಗ್ರಾಮದ ಬಳಿ ನಿರ್ಮಾಣ ಹಂತದ ವೈದ್ಯಕೀಯ ಕಾಲೇಜು ಕಟ್ಟಡದ ಸ್ಲ್ಯಾಬ್​ ಕುಸಿದು ಬಿದ್ದು, 9ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.

ಶನಿವಾರ ರಾತ್ರಿ ಕಾರ್ಮಿಕರು ಕೆಲಸ ಮಾಡುವಾಗ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಗಾಯಾಳು ಕಾರ್ಮಿಕರನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾವತ್ ಕಾರ್ಮಿಕರು ಪ್ರಾಣಾಪಯದಿಂದ ಪಾರಾಗಿದ್ದಾರೆ.

ಸ್ಟೀಲ್ ಪ್ರೇಂ ಅಳವಡಿಸಿ ಸಿಮೆಂಟ್ ಹಾಕುವ ವೇಳೆ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಘಟನೆ ಬಳಿಕ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಮತ್ತು ಎಸ್ಪಿ ಡಿ.ಎಲ್.ನಾಗೇಶ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು, ಎಂಜಿನಿಯರ್‌ಗಳಿಗೆ ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ. ತಾಂತ್ರಿಕವಾಗಿ ಏನೇ ಲೋಪದೋಷಗಳು ಇದ್ದರೆ ಸರಿಪಡಿಸಲಾಗುವುದು. ಸದ್ಯ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಮಗಾರಿ ತ್ವರಿತವಾಗಿ ನಡೆಸಬೇಕು ಎಂದು ಕಾರ್ಮಿಕರು ರಾತ್ರಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com