ಕೋವಿಡ್-19: ಬೆಂಗಳೂರಿನಲ್ಲಿ 22 ಸೇರಿ ರಾಜ್ಯದಲ್ಲಿ ಇಂದು 23 ಮಂದಿಗೆ ಪಾಸಿಟಿವ್; ಸಾವು ಶೂನ್ಯ
ರಾಜ್ಯದಲ್ಲಿ ಮತ್ತೆ ಕೊರೋನಾ ಉಲ್ಬಣಗೊಳ್ಳುವ ಆತಂಕ ಎದುರಾಗಿದ್ದು, ರಾಜ್ಯ ಸರ್ಕಾರ ಹಲವು ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದೆ. ಈ ಮಧ್ಯ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ23 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
Published: 26th December 2022 08:50 PM | Last Updated: 26th December 2022 08:50 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಉಲ್ಬಣಗೊಳ್ಳುವ ಆತಂಕ ಎದುರಾಗಿದ್ದು, ರಾಜ್ಯ ಸರ್ಕಾರ ಹಲವು ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದೆ. ಈ ಮಧ್ಯ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ23 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,71,821ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40265 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನು ಓದಿ: ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ಇಲ್ಲ, ಆದ್ರೆ ಮಾಸ್ಕ್ ಕಡ್ಡಾಯ: ಸಚಿವ ಸುಧಾಕರ್
ಬೆಂಗಳೂರಿನಲ್ಲಿ ಇಂದು 22 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1876612ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು 40 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,30,215ಕ್ಕೆ ಏರಿಕೆಯಾಗಿದೆ. ಇನ್ನು 1229 ಸಕ್ರಿಯ ಪ್ರಕರಣಗಳಿವೆ.