ಗಡಿ ವಿವಾದ: ಮಹಾರಾಷ್ಟ್ರ ನಿರ್ಣಯಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಖಂಡನೆ

ಗಡಿ ವಿವಾದಕ್ಕೆ ಸಂಬಂಧಿಸಿದಂತೆ  ಮಹಾರಾಷ್ಟ್ರ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿರುವ  ನಿರ್ಣಯವನ್ನು ಖಂಡಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
Updated on

ಬೆಳಗಾವಿ: ಗಡಿ ವಿವಾದಕ್ಕೆ ಸಂಬಂಧಿಸಿದಂತೆ  ಮಹಾರಾಷ್ಟ್ರ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿರುವ  ನಿರ್ಣಯವನ್ನು ಖಂಡಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

 ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣಕ್ಕಾಗಿ ಮಹಾರಾಷ್ಟ್ರ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ನಮ್ಮ ನಿಲುವಿನಲ್ಲಿ ಸ್ಪಷ್ಟತೆ ಇದೆ. ಕರ್ನಾಟಕದ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಗಡಿಯಿಂದಾಚೆಯಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದರು. 

 ಸುಪ್ರೀಂ ಕೋರ್ಟಿನಲ್ಲಿ ವಿಚಾರ ವಿದೆ. ನಾವು ನಮ್ಮ ಭೂಮಿಯನ್ನು ಬಿಟ್ಟು ಕೊಡುವುದಿಲ್ಲ ಎಂದರೆ ಅವರು ನಮ್ಮ ಜಾಗವನ್ನು ಪಡೆಯುವುದಾಗಿ ನಿರ್ಣಯ ಮಂಡಿಸಿದ್ದಾರೆ. ಇದು ನಮಗೂ ಅವರಿಗಿರುವ ವ್ಯತ್ಯಾಸ. ಪ್ರಕರಣ ಸರ್ವೋಚ್ಚ ನ್ಯಾಯಾಲಯದ ಲ್ಲಿರುವ ಸಂದರ್ಭದಲ್ಲಿ ಇದಕ್ಕೆ ಬೆಲೆ ಇಲ್ಲ. ರಾಜ್ಯಕ್ಕೆ ಸರ್ವೋಚ್ಚ ನ್ಯಾಯಾಲಯದಲ್ಲಿ ನ್ಯಾಯ ದೊರೆಯುವ ವಿಶ್ವಾಸವಿದೆ ಎಂದರು. 

ನಮ್ಮ ನಿಲುವು ಸಂವಿಧಾನಬದ್ದ ಹಾಗೂ ನ್ಯಾಯಸಮ್ಮತವಾಗಿದೆ.  ಕಾನೂನಿನ ವ್ಯಾಪ್ತಿಯಲ್ಲಿ ನಮ್ಮ  ನಿರ್ಣಯವೂ ಇದೆ. ವ್ಯತಿರಿಕ್ತವಾದ ಮಹಾರಾಷ್ಟ್ರದ ನಿರ್ಣಯ ಜವಾಬ್ದಾರಿಯುತವಲ್ಲ. ಇಡೀ ದೇಶ ಇದನ್ನು ನೋಡುತ್ತಿದ್ದು, ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವಂತಿದೆ. ಇದನ್ನು ನಾವು ಖಂಡಿಸುತ್ತೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com