ನವದೆಹಲಿ: ಸಚಿವ ಸಂಪುಟ ವಿಸ್ತರಣೆ ಸೇರಿ ಹಲವು ವಿಚಾರ ಕುರಿತು ವರಿಷ್ಠರೊಂದಿಗೆ ವಿಸ್ತೃತ ಚರ್ಚೆ- ಸಿಎಂ ಬೊಮ್ಮಾಯಿ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ನೇತೃತ್ವದಲ್ಲಿ ಸೋಮವಾರ ರಾತ್ರಿ ನಡೆದ ವರಿಷ್ಠರ ಸಭೆಯಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ವಿಸ್ತೃತವಾದ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Published: 27th December 2022 12:08 AM | Last Updated: 27th December 2022 12:13 AM | A+A A-

ಸಿಎಂ ಬಸವರಾಜ ಬೊಮ್ಮಾಯಿ
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ನೇತೃತ್ವದಲ್ಲಿ ಸೋಮವಾರ ರಾತ್ರಿ ನಡೆದ ವರಿಷ್ಠರ ಸಭೆಯಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ವಿಸ್ತೃತವಾದ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದಲ್ಲಿ ನಡೆದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಸಚಿವ ಸಂಪುಟ ವಿಸ್ತರಣೆ ಕುರಿತು ಈ ಬಾರಿ ಹೆಚ್ಚಿನ ಚರ್ಚೆ ನಡೆಸಲಾಗಿದೆ. ಎಲ್ಲಾ ವಿವರಗಳನ್ನು ನೀಡಿದ್ದೇನೆ. ಅಂತಿಮ ನಿರ್ಧಾರವನ್ನು ತಾವೇ ಪ್ರಕಟಿಸುವುದಾಗಿ ವರಿಷ್ಠರು ಹೇಳಿರುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಮೀಸಲಾತಿ ವಿಚಾರದ ಬಗ್ಗೆ ಚರ್ಚಿಸಲಾಗಿದ್ದು, ಸಾಮಾಜಿಕ ನ್ಯಾಯವನ್ನು ಮಾನದಂಡವನ್ನಾಗಿ ಇಟ್ಟುಕೊಂಡು ಮೀಸಲಾತಿ ನೀಡಲು ವರಿಷ್ಠರು ಸಲಹೆ ನೀಡಿದ್ದಾರೆ. ಈ ಬಗ್ಗೆ ಸರ್ವ ಪಕ್ಷ ಸಭೆಯಲ್ಲಿ ಚರ್ಚಿಸಿ ವೈಜ್ಞಾನಿಕ ರೀತಿಯಲ್ಲಿ ಮೀಸಲಾತಿ ಹೆಚ್ಚಿಸಲಾಗುವುದು ಎಂದರು.
ಜನವರಿ 12 ರಿಂದ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು, ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಲಾಗಿದೆ. ಡಿಸೆಂಬರ್ 30 ರಂದು ಅಮಿತ್ ಶಾ ಮಂಡ್ಯದಲ್ಲಿನ ಕಾರ್ಯಕ್ರಮಕ್ಕೆ ಆಗಮಿಸುವುದು ಖಚಿತವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.