ಮಂಗಳೂರು: ಬಿಸಿಎಂ ಹಾಸ್ಟೆಲ್​ನಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕುರುಂಜಿಬಾಗ್ ಸಮೀಪ ಇರುವ ಬಾಲಕಿಯರ ಬಿಸಿಎಂ ಹಾಸ್ಟೆಲ್ ನ ರೂಂನಲ್ಲಿ ಬೆಂಗಳೂರು ಮೂಲದ ಸೋನಿಯಾ(17) ಎಂಬ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕುರುಂಜಿಬಾಗ್ ಸಮೀಪ ಇರುವ ಬಾಲಕಿಯರ ಬಿಸಿಎಂ ಹಾಸ್ಟೆಲ್ ನ ರೂಂನಲ್ಲಿ ಬೆಂಗಳೂರು ಮೂಲದ ಸೋನಿಯಾ(17) ಎಂಬ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ಸುಳ್ಯ ಶಾರದಾ ಹೆಣ್ಣುಮಕ್ಕಳ ಪದವಿ ಪೂರ್ಣ ಕಾಲೇಜ್ ನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಸೋನಿಯಾ ನಿನ್ನೆ  ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರೋ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೋನಿಯಾ ಸೋಮವಾರ ಕಾಲೇಜಿಗೆ ಹೋಗದೆ ರೂಂನಲ್ಲಿಯೇ ಉಳಿದುಕೊಂಡಿದ್ದಳು. ಮಧ್ಯಾಹ್ನ ಊಟಕ್ಕೆ ತಟ್ಟೆ ತರಲೆಂದು ರೂಂ ಬಳಿ ಬಂದಿದ್ದ ಆಕೆಯ ಗೆಳತಿ ಎಷ್ಟೇ ಬಾಗಿಲು ಬಡಿದರೂ ಸೋನಿಯಾ ಬಾಗಿಲು ತೆರೆದಿರಲಿಲ್ಲ. ಮಲಗಿರಬಹುದೆಂದು ಸ್ವಲ್ಪ ಹೊತ್ತು ಅಲ್ಲೇ ಇದ್ದು, ಮತ್ತೆ ಬಾಗಿಲು ಬಡಿದಾಗಲೂ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಗೆಳತಿ ವಾರ್ಡನ್‌ಗೆ ಮಾಹಿತಿ ನೀಡಿದ್ದಾಳೆ. 

ಕೂಡಲೇ ಹಾಸ್ಟೆಲ್ ಸಿಬಂದಿ ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com