ಕೋವಿಡ್ ಆತಂಕ: ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಪ್ರಯಾಣಿಸಬೇಕೇ? ಹಾಗಿದ್ದರೆ ಮಾಸ್ಕ್ ಧರಿಸುವುದನ್ನು ಮರೆಯದಿರಿ...
ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಜನರು ಮಾಸ್ಕ್ ಧರಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡುತ್ತಿದ್ದಂತೆಯೇ ಇತ್ತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಮತ್ತು ಬಿಎಂಆರ್‌ಸಿಎಲ್ ಅಧಿಕಾರಿಗಳು ವಾಹನ ಹತ್ತುವ ಮೊದಲು ಮಾಸ್ಕ್ ಧರಿಸುವಂತೆ ಜನತೆಗೆ ಮನವಿ ಮಾಡಿಕೊಳ್ಳುತ್ತಿರುವುದು ಕಂಡುಬಂದಿದೆ.
Published: 28th December 2022 09:35 AM | Last Updated: 28th December 2022 09:35 AM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಜನರು ಮಾಸ್ಕ್ ಧರಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡುತ್ತಿದ್ದಂತೆಯೇ ಇತ್ತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಮತ್ತು ಬಿಎಂಆರ್‌ಸಿಎಲ್ ಅಧಿಕಾರಿಗಳು ವಾಹನ ಹತ್ತುವ ಮೊದಲು ಮಾಸ್ಕ್ ಧರಿಸುವಂತೆ ಜನತೆಗೆ ಮನವಿ ಮಾಡಿಕೊಳ್ಳುತ್ತಿರುವುದು ಕಂಡುಬಂದಿದೆ.
ವಿಶ್ವದ ಹಲವು ರಾಷ್ಟ್ರಗಳಲ್ಲಿ ಈಗಾಗಲೇ ಕೊರೋನಾ ಮಹಾಮಾರಿ ತಲೆ ಎತ್ತಿದ್ದು, ಈ ಆತಂಕ ಇದೀಗ ದೇಶ ಹಾಗೂ ರಾಜ್ಯದಲ್ಲು ಶುರುವಾರಿದೆ. ಹೀಗಾಗಿ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಬಿಎಂಆರ್‌ಸಿಎಲ್ ವಿವಿಧ ನಿಲ್ದಾಣಗಳಲ್ಲಿ ವಿಶೇಷವಾಗಿ ಮೆಜೆಸ್ಟಿಕ್‌ನಲ್ಲಿ ಜನರು ಮಾಸ್ಕ್ ಧರಿಸುವುದನ್ನು ಖಚಿತಪಡಿಸಿಕೊಳ್ಳಲು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಪ್ರಯಾಣಿಕರು ಮಾಸ್ಕ್ ಧರಿಸಿ ಆವರಣ ಪ್ರವೇಶಿಸಬೇಕು ಎಂದು ಸಿಬ್ಬಂದಿಗಳು ಒತ್ತಾಯಿಸುತ್ತಿದ್ದಾರೆ.
ಬಿಎಂಟಿಸಿ ಎಂಡಿ ಸೂರ್ಯ ಸೇನ್ ಮಾತನಾಡಿ, ಮಾಸ್ಕ್ ನಿಯಮದ ಬಗ್ಗೆ ಪ್ರಕಟಣೆಗಳ ಹೊರಡಿಸುವಂತೆ ಎಲ್ಲಾ ಕೇಂದ್ರಗಳಿಗೆ ಸೂಚನೆ ನೀಡಲಾಗಿದೆ. ಆದರೆ, ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಒತ್ತಾಯಿಸುತ್ತಿಲ್ಲ ಎಂದು ಹೇಳಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆಯ ಸೂಚನೆಗಳನ್ನು ಅನುಸರಿಸಿ, ಬಿಎಂಟಿಸಿ ನಿಲ್ದಾಣಗಳಲ್ಲಿನ ಪ್ರಯಾಣಿಕರಿಗಾಗಿ ಮಾಸ್ಕ್‌ಗಳ ಮಾರಾಟ ಮಾಡುವಂತೆ ಸೂಚಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಗಳು ಮಾತನಾಡಿ, ವೆಬ್‌ಸೈಟ್‌ನಲ್ಲಿ ಪ್ರಯಾಣಿಕರು ಹತ್ತುವ ಮೊದಲು ಮಾಸ್ಕ್ ಧರಿಸಬೇಕು ಎಂದು ಮನವಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಹಿಂದಿನ ಕೋವಿಡ್ ಅಲೆಗಳಲ್ಲಿ ಕೈಗೊಂಡ ಕ್ರಮಗಳನ್ನೇ ಇದೀಗ ಬಿಎಂಆರ್'ಸಿಎಲ್ ಕೈಗೊಂಡಿದ್ದು. ಮಾಸ್ಕ್ ಇಲ್ಲದೆ ಪ್ರಯಾಣಿಕರ ಪ್ರವೇಶವನ್ನು ನಿರಾಕರಿಸುತ್ತಿದೆ.
“ಮಕ್ಕಳು, ವೃದ್ಧರು ಮತ್ತು ಗರ್ಭಿಣಿಯರು ಮತ್ತು ದೀರ್ಘಕಾಲಿಕ ರೋಗ ಇರುವವರು ಕೂಡ ಮೆಟ್ರೋದಲ್ಲಿ ಪ್ರಯಾಣಿಸುತ್ತಾರೆ. ನಾವು ಅವರ ಸುರಕ್ಷತೆಯಲ್ಲಿ ರಾಜಿ ಮಾಡಿಕೊಳ್ಳಲು ಬಯಸುವುದಿಲ್ಲ. ಹೀಗಾಗಿ ಮಾಸ್ಕ್ ಧರಿಸದವರಿಗೆ ಪ್ರಯಾಣಿಸಲು ಅನುಮತಿ ನೀಡುವುದಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.