ಮಂಗಳೂರಿನ ಸುರತ್ಕಲ್ ಬಳಿ ಜಲೀಲ್ ಹತ್ಯೆ: ಮುಸ್ಲಿಂ ಸಮುದಾಯದಿಂದ ಬೃಹತ್ ಪ್ರತಿಭಟನೆ
ಮಂಗಳೂರು ಹೊರವಲಯ ಸುರತ್ಕಲ್‌ನ ಕಾಟಿಪಳ್ಳದ ಜಲೀಲ್ ಕೊಲೆ ಪ್ರಕರಣದಲ್ಲಿ ಕುಟುಂಬಸ್ಥರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಮಂಗಳೂರಿನಲ್ಲಿ ನಿನ್ನೆ ಮಂಗಳವಾರ ಮುಸ್ಲಿಂ ಸಮುದಾಯದವರು ಬೃಹತ್ ಪ್ರತಿಭಟನೆ ನಡೆಸಿದರು.
Published: 28th December 2022 09:19 AM | Last Updated: 28th December 2022 09:46 AM | A+A A-

ಬಂಧನಕ್ಕೀಡಾಗಿರುವ ಮತ್ತೋರ್ವ ಆರೋಪಿ
ಮಂಗಳೂರು: ಮಂಗಳೂರು ಹೊರವಲಯ ಸುರತ್ಕಲ್‌ನ ಕಾಟಿಪಳ್ಳದ ಜಲೀಲ್ ಕೊಲೆ ಪ್ರಕರಣದಲ್ಲಿ ಕುಟುಂಬಸ್ಥರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಮಂಗಳೂರಿನಲ್ಲಿ ನಿನ್ನೆ ಮಂಗಳವಾರ ಮುಸ್ಲಿಂ ಸಮುದಾಯದವರು ಬೃಹತ್ ಪ್ರತಿಭಟನೆ ನಡೆಸಿದರು.
ಜಲೀನ್ ನನ್ನು ಕಳೆದ ಶನಿವಾರ ಅಪರಿಚಿತ ದುಷ್ಕರ್ಮಿಗಳು ಜಲೀಲ್ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದರು. ಈ ಮಧ್ಯೆ, ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಟಿಪಳ್ಳದ 28 ವರ್ಷದ ಲಕ್ಷ್ಮಿ ದೇವಾಡಿಗನನ್ನು ಬಂಧಿಸಲಾಗಿದ್ದು, ಆತ ಪೊಲೀಸ್ ಕಸ್ಟಡಿಯಲ್ಲಿದ್ದಾನೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೆ 4 ಮಂದಿಯನ್ನು ಬಂಧಿಸಲಾಗಿದೆ.
@XpressBengaluru ಜಲೀನ್ ನನ್ನು ಕಳೆದ ಶನಿವಾರ ಅಪರಿಚಿತ ದುಷ್ಕರ್ಮಿಗಳು ಸುರತ್ಕಲ್ ಬಳಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದರು. ಈ ಮಧ್ಯೆ, ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಟಿಪಳ್ಳದ 28 ವರ್ಷದ ಲಕ್ಷ್ಮಿ ದೇವಾಡಿಗನನ್ನು ಬಂಧಿಸಲಾಗಿದ್ದು, ಆತ ಪೊಲೀಸ್ ಕಸ್ಟಡಿಯಲ್ಲಿದ್ದಾನೆ. #Suratkal #JaleelMurderCase pic.twitter.com/f6r0Laji6q
— kannadaprabha (@KannadaPrabha) December 28, 2022
ನಿಷೇಧಾಜ್ಞೆ ಜಾರಿ: ಜಲೀಲ್ ಹತ್ಯೆ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸುರತ್ಕಲ್, ಕಾವೂರು, ಬಜಪೆ ಮತ್ತು ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ವಿಧಿಸಿದ್ದ 144 ಸೆಕ್ಷನ್ ಅನ್ನು ನಾಳೆ ಬೆಳಗ್ಗೆ 6 ಗಂಟೆಯವರೆಗೆ ಮುಂದುವರಿಸಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.
ನಿಷೇಧಾಜ್ಞೆ ಸಮಯದಲ್ಲಿ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ದ್ವಿಚಕ್ರ ವಾಹನದಲ್ಲಿ ಹಿಂಬದಿ ಪುರುಷ ಸವಾರರ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದಕ್ಕೆ ಮಹಿಳೆಯರು, 60 ವರ್ಷ ಮೇಲ್ಪಟ್ಟ ಹಿರಿಯರು ಹಾಗೂ 18 ವರ್ಷ ಕೆಳಗಿನ ಮಕ್ಕಳಿಗೆ ವಿನಾಯಿತಿ ಇರಲಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತು ತುರ್ತು ಸಂದರ್ಭದಲ್ಲಿ ಸಂಚಾರಕ್ಕೆ ಯಾವುದೇ ನಿರ್ಬಂಧ ಇಲ್ಲ.
ಈ ಅವಧಿಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳ ಸಭೆ, ಸಾರ್ವಜನಿಕ ಸಭೆಗಳು, ಜಾಥಾಗಳು, ಮೆರವಣಿಗೆಗಳು ಮತ್ತು ಬಂದೂಕುಗಳು, ಸ್ಫೋಟಕಗಳು ಮತ್ತು ಪಟಾಕಿಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಚೋದನಕಾರಿ ಘೋಷಣೆಗಳನ್ನು ಕೂಗುವುದು ಮತ್ತು ವಿವಿಧ ವರ್ಗಗಳ ಜನರ ಭಾವನೆಗಳಿಗೆ ಧಕ್ಕೆ ತರುವ ಯಾವುದೇ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.
ಈ ಹತ್ಯೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಕೃಷ್ಣಾಪುರ ನೈತಂಗಡಿ ನಿವಾಸಿ ಶೈಲೇಶ್ ಅಲಿಯಾಸ್ ಶೈಲೇಶ್ ಪೂಜಾರಿ(21), ಉಡುಪಿಯ ಹೆಜಮಾಡಿ ನಿವಾಸಿ ಸವಿನ್ ಕಾಂಚನ್ ಅಲಿಯಾಸ್ ಮುನ್ನ (24) ಹೆಜಮಾಡಿ ಉಡುಪಿ ಹತ್ಯೆಯಲ್ಲಿ ನೇರವಾಗಿ ಭಾಗಿಯಾದವರು . ಹತ್ಯೆ ಮಾಡಿದ ಆರೋಪಿಗಳಿಗೆ ಪರಾರಿಯಾಗಲು ಸಹಕರಿಸಿದ ಆರೋಪದಲ್ಲಿ ಕೃಷ್ಣಾಪುರ 3ನೇ ಬ್ಲಾಕ್ ನಿವಾಸಿ ಪವನ್ ಅಲಿಯಾಸ್ ಪಚ್ಚು (23) ಎಂಬಾತನನ್ನು ಪೊಲೀಸರು ಡಿ 25 ರಂದು ರಾತ್ರಿ ಬಂಧಿಸಿದ್ದರು.