ನಾಲ್ಕು ತಿಂಗಳ ಮಗು ಸಾವು: ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ವಿರುದ್ಧ ಪೋಷಕರ ಆಕ್ರೋಶ

ನಾಲ್ಕು ತಿಂಗಳ ಮಗು ಸಾವನ್ನಪ್ಪಿದ್ದರಿಂದ ರೊಚ್ಚಿಗೆದ್ದ ಪೋಷಕರು ಬುಧವಾರ ನಗರದ ಜಿಲ್ಲಾಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು. ಮಕ್ಕಳ ವಿಭಾಗದ ವಾರ್ಡ್ ನಲ್ಲಿದ್ದ ಮಗು ಸಾವನ್ನಪ್ಪಿದ್ದು, ಇದಕ್ಕೆ ಶುಶ್ರೂಷಕಿಯರ ನಿರ್ಲಕ್ಷ್ಯವೇ ಕಾರಣ ಎಂದು ಪ್ರತಿಭಟನಾಕಾರರು ಆರೋಪಿಸಿದರು. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು: ನಾಲ್ಕು ತಿಂಗಳ ಮಗು ಸಾವನ್ನಪ್ಪಿದ್ದರಿಂದ ರೊಚ್ಚಿಗೆದ್ದ ಪೋಷಕರು ಬುಧವಾರ ನಗರದ ಜಿಲ್ಲಾಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು. ಮಕ್ಕಳ ವಿಭಾಗದ ವಾರ್ಡ್ ನಲ್ಲಿದ್ದ ಮಗು ಸಾವನ್ನಪ್ಪಿದ್ದು, ಇದಕ್ಕೆ ಶುಶ್ರೂಷಕಿಯರ ನಿರ್ಲಕ್ಷ್ಯವೇ ಕಾರಣ ಎಂದು ಪ್ರತಿಭಟನಾಕಾರರು ಆರೋಪಿಸಿದರು. 

ಹಿಂಸೆ ನೀಡಿ ಮಗುವಿಗೆ ಹಾಲುಣಿಸಬೇಡಿ ಎಂದು ವೈದ್ಯರು ಹೇಳಿದ್ದರೂ, ಅವರ ಮಾತನ್ನು ಮೀರಿ, ಮಗುವಿಗೆ ಎದೆ ಹಾಲು ನೀಡಲು ನರ್ಸ್ ಒತ್ತಾಯಿಸಿದ್ದರಿಂದ ಮಗು ಉಸಿರುಕಟ್ಟಿ ಸಾವನ್ನಪ್ಪಿರುವುದಾಗಿ ಪೋಷಕರು ಹೇಳಿದ್ದಾರೆ.

ಎಪಿಲೆಪ್ಸಿಯಿಂದ ಮಗು ಸಾವನ್ನಪ್ಪಿದೆ ಎಂದು ಜಿಲ್ಲಾಸ್ಪತ್ರೆ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಿ. ಮೋಹನ ಕುಮಾರ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com