ಬೆಳಗಾವಿ ಅಧಿವೇಶನಕ್ಕೆ ತೆರೆ: ವಿಧಾನಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 19 ರಿಂದ ಆರಂಭವಾಗಿದ್ದ ಚಳಿಗಾಲದ ವಿಧಾನಮಂಡಲ ಅಧಿವೇಶನಕ್ಕೆ ನಿಗದಿಗಿಂತ ಒಂದು ದಿನ ಮುಂಚಿತವಾಗಿ ಗುರುವಾರವೇ ತೆರೆ ಬಿದ್ದಿದೆ.
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ.
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ.

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 19 ರಿಂದ ಆರಂಭವಾಗಿದ್ದ ಚಳಿಗಾಲದ ವಿಧಾನಮಂಡಲ ಅಧಿವೇಶನಕ್ಕೆ ನಿಗದಿಗಿಂತ ಒಂದು ದಿನ ಮುಂಚಿತವಾಗಿ ಗುರುವಾರವೇ ತೆರೆ ಬಿದ್ದಿದೆ.

ಸ್ವೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ಸಂಜೆ ವಿಧಾನಸಭೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ.

ಬೆಳಗಾವಿಯಲ್ಲಿ ಡಿಸೆಂಬರ್ 19 ರಂದು ಪ್ರಾರಂಭವಾಗಿದ್ದ ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 30 ರಂದು ಕೊನೆಗೊಳ್ಳಬೇಕಿತ್ತು. ಆದರೆ, ಗುರುವಾರ ಕೊನೆಯ ದಿನ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನಿನ್ನೆಯೇ ಘೋಷಿಸಿದ್ದರು.

ಡಿಸೆಂಬರ್ 30 ಮತ್ತು 31 ರಂದು ಮಂಡ್ಯ, ದೇವನಹಳ್ಳಿ ಮತ್ತು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳು ಮತ್ತು ಪಕ್ಷದ ಸಭೆಗಳಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಮಿತ್ ಶಾ ಅವರ ಭೇಟಿಗಾಗಿ ಬಿಜೆಪಿ ಸರ್ಕಾರ ವಿಧಾನಮಂಡಲದ ಅಧಿವೇಶನವನ್ನು ಒಂದು ದಿನ ಮುಂಚಿತವಾಗಿ ಮೊಟಕುಗೊಳಿಸಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com