ಕಳಸಾ-ಬಂಡೂರಿ ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್: ಚುನಾವಣೆಗೆ ತಂತ್ರರೂಪಿಸಿ ಹೋರಾಟಕ್ಕಿಳಿಯುತ್ತಿದ್ದ ಕಾಂಗ್ರೆಸ್'ಗೆ ತಿರುಗೇಟು

ಮಹದಾಯಿ ಯೋಜನೆ ಜಾರಿಗಾಗಿ ಸರ್ಕಾರದ ಮೇಲೆ ಒತ್ತರ ಹೇರಲು ಮುಂದಾಗಿದ್ದ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ತಿರುಗೇಟು ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮಹದಾಯಿ ಯೋಜನೆ ಜಾರಿಗಾಗಿ ಸರ್ಕಾರದ ಮೇಲೆ ಒತ್ತರ ಹೇರಲು ಮುಂದಾಗಿದ್ದ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ತಿರುಗೇಟು ನೀಡಿದೆ.

ಯೋಜನೆ ಜಾರಿಗೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ಜ.2ರಂದು ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಿತ್ತು. ಆದರೆ, ಬೆಳಗಾವಿ ಅಧಿವೇಶನದ ಕೊನೆಯ ದಿನ ಮಹದಾಯಿ ಯೋಜನೆ ಅಸ್ತು ನೀಡುವ ಮೂಲಕ ಕಾಂಗ್ರೆಸ್ಸಿಗೆ ಬಿಜೆಪಿ ಭರ್ಜರಿ ಎದಿರೇಟು ನೀಡಿದೆ.

ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು, ತುಂಬಾ ಕಡಿಮೆ ಹಾಗೂ ತಡವಾಗಿದೆ ಎಂದು ಹೇಳಿದೆ.

ಇದು ತುಂಬಾ ಕಡಿಮೆ, ತಡವಾಗಿದೆ ಎಂದು ಕರ್ನಾಟಕ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಟ್ವೀಟ್ ಮಾಡಿದ್ದಾರೆ.

ಬೆಳಗಾವಿ ಮತ್ತು ಹುಬ್ಬಳ್ಳಿ-ಧಾರವಾಡದಾದ್ಯಂತ 59 ಲಕ್ಷ ಜನರಿಗೆ ಮಹದಾಯಿ ನದಿಯಿಂದ 3.9 ಟಿಎಂಸಿ ಅಡಿ ನೀರನ್ನು ಕಾಂಗ್ರೆಸ್ ಖಾತರಿಪಡಿಸುತ್ತದೆ ಎಂದು ಸುರ್ಜೇವಾಲಾ ಹೇಳಿದ್ದಾರೆ.

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಮೊದಲ ಸಚಿವ ಸಂಪುಟ ಸಭೆಯಲ್ಲಿ 500 ಕೋಟಿ ರೂ.ಗಳನ್ನು ಮಂಜೂರು ಮಾಡಿ 3,000 ಕೋಟಿ ರೂ.ಗಳನ್ನು ಮಂಜೂರು ಮಾಡಿ ದಾಖಲೆ ಸಮಯದಲ್ಲಿ ಯೋಜನೆಗಳನ್ನು ಕಾರ್ಯಗತಗೊಳಿಸಲಿದೆ ಎಂದು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಶುಕ್ರವಾರ ವಿಜಯಪುರದಿಂದ ರಾಜ್ಯ ಪ್ರವಾಸ ಆರಂಭಿಸುತ್ತಿದ್ದು, ಸೋಮವಾರ ಹುಬ್ಬಳ್ಳಿಯಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ರಾಜ್ಯ ಪ್ರವಾಸದ ವೇಳೆ ಕುಡಿಯುವ ನೀರು ಮತ್ತು ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಳ್ಳುವಲ್ಲಿ ವಿಳಂಬ ಸೇರಿದಂತೆ ಇತರೆ ವಿಚಾರಗಳ ಕುರಿತು ದನಿಯೆತ್ತಲು ಮುಂದಾಗಿದ್ದಾರೆ.

ಸಿದ್ದರಾಮಯ್ಯ ಮತ್ತು ಶಿವಕುಮಾರ್ ಡಿಸೆಂಬರ್ 30 ರಿಂದ ಜನವರಿ 29 ರವರೆಗೆ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ನಂತರ ಸಿದ್ದರಾಮಯ್ಯ ಉತ್ತರ ಕರ್ನಾಟಕದ ವಿಧಾನಸಭಾ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸಿದರೆ, ಶಿವಕುಮಾರ್ ದಕ್ಷಿಣ ಕರ್ನಾಟಕದ ಕ್ಷೇತ್ರಗಳಲ್ಲಿ ಪ್ರವಾಸ ಮಾಡಲಿದ್ದಾರೆಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com