ರಾಜ್ಯದಲ್ಲಿ ತಗ್ಗಿದ ಕೊರೋನಾ ಅಬ್ಬರ: ಮಹಾಮಾರಿಗೆ ಇಂದು 58 ಬಲಿ, ಬೆಂಗಳೂರಿನಲ್ಲಿ 6,685 ಸೇರಿ 14,366 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 14,366 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಅವರು...
Published: 01st February 2022 08:01 PM | Last Updated: 01st February 2022 08:06 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 14,366 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಅವರು ಮಂಗಳವಾರ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಇಂದು ಪಾಸಿಟಿವ್ ಪ್ರಕರಣಗಳ ಸಂಖ್ಯೆ 15 ಸಾವಿರಕ್ಕಿಂತ ಕಡಿಮೆ ಇದ್ದು, ಪಾಸಿಟಿವ್ ಪ್ರಮಾಣ ಶೇ. 13.45ಕ್ಕೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 9 ಮಂದಿ ಸೇರಿದಂತೆ ರಾಜ್ಯದಲ್ಲಿ ಕೊರೋನಾದಿಂದ ಇಂದು 58 ಮಂದಿ ಮೃತಪಟ್ಟಿದ್ದಾರೆ ಎಂದು ಸುಧಾಕರ್ ಅವರು ತಿಳಿಸಿದ್ದಾರೆ.
ಇದನ್ನು ಓದಿ: ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.17ಕ್ಕೆ ಇಳಿಕೆ; ಆದರೂ ಎಚ್ಚರಿಕೆ ವಹಿಸುವಂತೆ ಜನರಿಗೆ ಸಚಿವ ಸುಧಾಕರ್ ಮನವಿ
ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಇಂದು ಏಳು ಸಾವಿರಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾಗಿದ್ದು, 6,685 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವರು ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಚೇತರಿಕೆ ಪ್ರಮಾಣ ಹೊಸ ಪ್ರಕರಣಗಳಿಗಿಂತ ಹೆಚ್ಚಾಗಿದ್ದು, 60,914 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 1,97,725 ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 1,06,799 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ ಎಂದು ಸುಧಾಕರ್ ಅವರು ಹೇಳಿದ್ದಾರೆ.
Cases in Bengaluru dip below 7k as positivity rate continues to fall:
— Dr Sudhakar K (@mla_sudhakar) February 1, 2022
◾New cases in State: 14,366
◾New cases in B'lore: 6,685
◾Positivity rate in State: 13.45%
◾Discharges: 60,914
◾Active cases State: 1,97,725 (B'lore- 105k)
◾Deaths:58 (B'lore- 09)
◾Tests: 1,06,799
ಇಂದಿನ 01/02/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/H7ENvLjEqZ @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/nTlq2SfSgB
— K'taka Health Dept (@DHFWKA) February 1, 2022