ಸಮವಸ್ತ್ರ ಸಂಹಿತೆ ಕಡ್ಡಾಯ; ಕೇಸರಿ ಶಾಲು, ಹಿಜಾಬ್ ಧರಿಸಲು ಅವಕಾಶ ಇಲ್ಲ: ಕರ್ನಾಟಕ ಸರ್ಕಾರ ಖಡಕ್ ಸೂಚನೆ

ಕರ್ನಾಟಕದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿಯೂ ಸಮವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಕೇಸರಿ ಶಾಲು, ಹಿಜಾಬ್ ಧರಿಸಲು ಅವಕಾಶ ಇಲ್ಲ ಎಂದು ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ.

Published: 04th February 2022 04:22 PM  |   Last Updated: 04th February 2022 05:36 PM   |  A+A-


Hijab and Saffron Shawls in Schools Colleges of Karnataka

ಸಂಗ್ರಹ ಚಿತ್ರ

Online Desk

ಬೆಂಗಳೂರು: ಕರ್ನಾಟಕದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿಯೂ ಸಮವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಕೇಸರಿ ಶಾಲು, ಹಿಜಾಬ್ ಧರಿಸಲು ಅವಕಾಶ ಇಲ್ಲ ಎಂದು ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ.

ಹಿಜಾಬ್ (Hijab) ಅಥವಾ ಕೇಸರಿ ಶಾಲು (Saffron Shawl) ಧರಿಸಿ ಶಾಲಾ ಕಾಲೇಜುಗಳಿಗೆ ಬರಲು ಯಾರಿಗೂ ಅವಕಾಶ ನೀಡುವುದಿಲ್ಲ. ಈ ಕುರಿತು ಕರ್ನಾಟಕ ಶಿಕ್ಷಣ ಕಾಯ್ದೆಯ ಅನ್ವಯ ಸುತ್ತೋಲೆ ಪ್ರಕಟಿಸಿದ್ದೇವೆ ಎಂದು ಶಿಕ್ಷಣ ಸಚಿವ  ಬಿ.ಸಿ.ನಾಗೇಶ್ (BC Nagesh) ಸ್ಪಷ್ಟಪಡಿಸಿದ್ದಾರೆ. 

ಇದನ್ನೂ ಓದಿ: ಉಡುಪಿ ಹಿಜಾಬ್ ವಿವಾದ ತಾರಕಕ್ಕೆ: ಕಾಲೇಜು ವರ್ತನೆ ವಿರುದ್ಧ ಶಶಿ ತರೂರ್, ಮೆಹಬೂಬಾ ಮುಫ್ತಿ ಕಿಡಿ

ಉಡುಪಿಯ ಕುಂದಾಪುರ ಸರ್ಕಾರಿ ಕಾಲೇಜಿನ ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಬೊಮ್ಮಾಯಿ ಅವರಿಗೆ ಮಾಹಿತಿ ನೀಡಿದರು. ಸಮವಸ್ತ್ರ ಸಂಹಿತೆ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಇಲಾಖೆ ಮತ್ತು ಪಿಯು ಮಂಡಳಿಯ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ನಂತರ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಈ ವಿಚಾರ ಪ್ರಸ್ತುತ ನ್ಯಾಯಾಲಯದಲ್ಲಿದೆ. ಅಡ್ವೊಕೇಟ್ ಜನರಲ್ ಅವರೊಂದಿಗೆ ಮುಖ್ಯಮಂತ್ರಿ ಚರ್ಚಿಸಿದ್ದಾರೆ. ಕಾನೂನು ತಜ್ಞರ ಸಲಹೆ ಪಡೆದು ಮುಂದುವರಿಯಬೇಕಿದೆ. ಸರ್ಕಾರದ ನಿಲುವನ್ನು ಕೋರ್ಟ್​ಗೆ ಮನವರಿಕೆ ಮಾಡಿಕೊಡಲು ಅಡ್ವೊಕೇಟ್ ಜನರಲ್​ಗೆ ಸೂಚಿಸಿದ್ದಾರೆ. ಹೈಕೋರ್ಟ್​ ತೀರ್ಪು ಬರುವವರೆಗೆ ಸಮವಸ್ತ್ರ ಸಂಹಿತೆ ಪಾಲಿಸಬೇಕು ಎನ್ನುವುದನ್ನು ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸುತ್ತೇವೆ. ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಇದನ್ನೂ ಓದಿ: ಧರ್ಮ ಪಾಲಿಸಲು ಯಾರೂ ಶಾಲೆಗೆ ಬರಬಾರದು: ಹಿಜಾಬ್ ವಿವಾದ ಕುರಿತು ಆರಗ ಜ್ಞಾನೇಂದ್ರ ಹೇಳಿಕೆ

ಶಾಸಕರ ವಿರುದ್ಧ ಆರೋಪ ಸರಿಯಲ್ಲ
ಇದೇ ವೇಳೆ ಉಡುಪಿ ಶಾಸಕ ರಘುಪತಿ ಭಟ್ ಅವರ ವಿರುದ್ಧ ವಿನಾಕಾರಣ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ. ಅವರು ಶಿಕ್ಷಣ ವಂಚಿತ ಮಕ್ಕಳಿಗೆ ಸಮಸ್ಯೆಯಾಗದಂತೆ ಹಲವು ಕ್ರಮ ತೆಗೆದುಕೊಂಡಿದ್ದಾರೆ. ಎಸ್​ಡಿಎಂಸಿ ಅಧ್ಯಕ್ಷರಾಗಿ ಶಾಲೆ ಅಭಿವೃದ್ಧಿಪಡಿಸಿದ್ದಾರೆ. ಸ್ಕಾರ್ಫ್​ ವಿಚಾರದಲ್ಲಿ ಬಾಂಬೆ, ಕೇರಳ ಹೈಕೋರ್ಟ್​ಗಳು ಈಗಾಗಲೇ​ ತೀರ್ಪು ನೀಡಿವೆ. ಶಾಲೆಗಳಿಗೆ ಸ್ಕಾರ್ಪ್​ ಧರಿಸಿ ಬರಬಾರದು ಎಂದೇ ಹೇಳಿವೆ. ಶಾಲಾ ಕಾಲೇಜು ಸೋದರತ್ವ ಬೆಳೆಸಲು ಪೂರಕವಾಗಬೇಕು. ಮಕ್ಕಳು ಶಾಲೆಗೆ ಸೇರುವಾಗ ವಸ್ತ್ರಸಂಹಿತೆಯನ್ನು ಒಪ್ಪಿ ಸಹಿ ಹಾಕಿರುತ್ತಾರೆ. ಕಳೆದ ಒಂದೂವರೆ ವರ್ಷದಿಂದ ಸಮವಸ್ತ್ರ ಧರಿಸಿ ಬಂದಿದ್ದಾರೆ. ಇದೀಗ ಕೆಲವರಿಂದ ಸಮಸ್ಯೆಯಾಗಿದೆ. ಸಮಸ್ಯೆ ಬಗೆಹರಿಸಲು ಶಾಸಕರು ಮತ್ತು ಮುಖಂಡರ ಜೊತೆ ಚರ್ಚೆ ನಡೆಸುತ್ತೇವೆ. ವಸ್ತ್ರಸಂಹಿತೆ ಪಾಲಿಸುವಂತೆ ಮತ್ತೆ ಸುತ್ತೋಲೆ ಹೊರಡಿಸುತ್ತೇವೆ ಎಂದು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಶಿಕ್ಷಣ ಸಚಿವ ನಾಗೇಶ್​ ಹೇಳಿದರು.

ಇದನ್ನೂ ಓದಿ: ಉಡುಪಿ ಹಿಜಾಬ್ ಪ್ರಕರಣ: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್


Stay up to date on all the latest ರಾಜ್ಯ news
Poll
CM Basavaraja Bommai is press meet

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಕಾಲ ಸನ್ನಿಹಿತ ಎಂಬ ಭಾವನೆ ಇದೆಯೇ?


Result
ಹೌದು
ಇಲ್ಲ

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • G Madhava Rao

    ವಿದ್ಯಾರ್ಥಿಗಳು ವಿದ್ಯೆ ಕಲಿಯುವುದು ಮುಂದೆ ತಾವು ಒಬ್ಬ ಸತ್ಪ್ರಜೆಯಾಗಿ ತಮ್ಮ ಮನೆಗೂ, ತಮ್ಮ ಊರಿಗೂ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ದೇಶಕ್ಕೂ ಒಳ್ಳೆಯ ಹೆಸರನ್ನು ತರಲು. ಶಾಲೆಗಳಿರುವುದು ಧಾರ್ಮಿಕ ಆಚಾರ, ವಿಚಾರಗಳ ಪಾಲನೆಗೆ ಅಲ್ಲ. ಇಲ್ಲಿ ಎಲ್ಲರೂ ಭಾರತ ಮಾತೆಯ ಮಕ್ಕಳಾಗಿ ಇರಬೇಕೆ ಹೊರತು ತಮ್ಮ ತಮ್ಮ ಧರ್ಮಾಚರಣೆ ಗೆ ಪಟ್ಟು ಹಿಡಿಯುವುದು ಸಮಾಜಕ್ಕೆ ಹಿತವಲ್ಲ. ಯುನಿಫಾರ್ಮ್ ನ ಮೂಲ ಉದ್ದೇಶ ನಾವೆಲ್ಲರೂ ಒಂದೇ, ಯಾವುದೇ ಜಾತಿ ಬೇಧ ನಮ್ಮಲ್ಲಿ ಇಲ್ಲ. ನಾವೆಲ್ಲರೂ ಭಾರತ ಮಾತೆಯ ಮಕ್ಕಳು ಎಂದು ಬಿಂಬಿಸಲು. ಅದನ್ನು ಬಿಟ್ಟು ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಯಾರದ್ದೋ ಕುತಂತ್ರಕ್ಕೆ ಬಲಿಯಾಗಿ, ಅದರಲ್ಲೂ ಸಾಮರಸ್ಯಕ್ಕೆ ಹೆಸರಾದ ಉಡುಪಿ ಜಿಲ್ಲೆಗೆ ಧರ್ಮದ ಹೆಸರಿನಲ್ಲಿ ಕೆಟ್ಟ ಹೆಸರು ತರುತ್ತಿರುವುದು ಖಂಡನೀಯ.
    6 months ago reply
flipboard facebook twitter whatsapp