ಕಾಮಗಾರಿಗಳ ಗುಣಮಟ್ಟ ಕಾಪಾಡುವುದು ಗುತ್ತಿಗೆದಾರರ ಕರ್ತವ್ಯ: ಸಚಿವ ಕೆ.ಗೋಪಾಲಯ್ಯ
ಮಹಾಲಕ್ಷ್ಮಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ 75 ರ ಕುರುಬರಹಳ್ಳಿ ಪೈಪ್ ಲೈನ್ ನಲ್ಲಿ ಕೈ ಗೊಂಡಿರುವ ರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಸ್ಥಳೀಯ ಶಾಸಕರೂ ಆದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಇಂದು ಬೆಳಿಗ್ಗೆ ವೀಕ್ಷಿಸಿದರು.
Published: 05th February 2022 12:04 PM | Last Updated: 05th February 2022 12:19 PM | A+A A-

ರಸ್ತೆ ಡಾಂಬರೀಕರಣ ಕಾಮಗಾರಿ ಪರಿಶೀಲಿಸುತ್ತಿರುವ ಸಚಿವರು.
ಬೆಂಗಳೂರು: ಮಹಾಲಕ್ಷ್ಮಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ 75 ರ ಕುರುಬರಹಳ್ಳಿ ಪೈಪ್ ಲೈನ್ ನಲ್ಲಿ ಕೈ ಗೊಂಡಿರುವ ರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಸ್ಥಳೀಯ ಶಾಸಕರೂ ಆದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಇಂದು ಬೆಳಿಗ್ಗೆ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜನರ ತೆರಿಗೆ ಹಣದಲ್ಲಿ ನಡೆಯುತ್ತಿರುವ ಸರ್ಕಾರದ ಎಲ್ಲ ಅಭಿವೃದ್ಧಿ ಕಾಮಗಾರಿಗಳು ಉತ್ತಮ ಗುಣಮಟ್ಟದಿಂದ ಕೂಡಿರಬೇಕು. ಗುತ್ತಿಗೆದಾರರು, ಇಂಜಿನಿಯರ್ ಈ ಬಗ್ಗೆ ಹೆಚ್ಚು ಮುತುವರ್ಜಿ ವಹಿಸಬೇಕೆಂದು ಸೂಚಿಸಿದರು.
ಇದನ್ನೂ ಓದಿ: ಕೋವಿಡ್ಕೇರ್ ಸೆಂಟರ್ಗೆ ಸಚಿವ ಗೋಪಾಲಯ್ಯ ಚಾಲನೆ
ಸ್ಥಳೀಯರು ಕೂಡ ತಮ್ಮ ಬಡಾವಣೆಗಳಲ್ಲಿ ನಡೆಯುತ್ತಿರುವ ಸಾರ್ವಜನಿಕ ಕಾಮಗಾರಿಗಳು ಎಷ್ಟರ ಮಟ್ಟಿಗೆ ಗುಣಮಟ್ಟದಿಂದ ಕೂಡಿರುತ್ತವೆ ಎನ್ನುವುದರ ಮೇಲೆ ನಿಗಾ ಇರಿಸಬೇಕು. ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಗುತ್ತಿಗೆದಾರರು, ಇಂಜಿನಿಯರ್ ಗಳು ಕಾಮಗಾರಿ ಮಾಡಿಕೊಂಡು ಹೋಗುತ್ತಾರೆ ಎಂದು ಕೈ ಕಟ್ಟಿಕೊಂಡು ನೋಡುತ್ತ ನಿಂತುಕೊಳ್ಳದೆ. ತಮ್ಮ ಬಡಾವಣೆಯ ಅಭಿವೃದ್ಧಿ ಕಾಮಗಾರಿ ತನ್ನ ಮನೆಯದೆ ಎಂಬ ಭಾವನೆ ಎಲ್ಲರಿಗೂ ಬಂದರೆ ಕಾಮಗಾರಿಗಳು ದೀರ್ಘ ಬಾಳಿಕೆ ಬರಲು ಸಾಧ್ಯವಾಗುತ್ತದೆ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಬೆಂಗಳೂರು ಉತ್ತರ ಜಿಲ್ಲಾ ಘಟಕದ ಉಪಾಧ್ಯಕ್ಷ ಜಯರಾಮಣ್ಣ, ಜಯಸಿಂಹ ,ನಿಸರ್ಗ ಜಗದೀಶ್ ವಾರ್ಡ್ ಅಧ್ಯಕ್ಷ ಮಂಜುನಾಥ್ ಮತ್ತು ಸ್ಥಳೀಯ ಮುಖಂಡರು, ಬಿಬಿಎಂಪಿ ಇಂಜಿನಿಯರ್ ಗಳು ಉಪಸ್ಥಿತರಿದ್ದರು.