ಆಸ್ತಿ ತೆರಿಗೆ ವ್ಯಾಪ್ತಿಗೆ ಬಾರದ ವಸತಿ ಸಮುಚ್ಚಯಗಳಲ್ಲಿ ಖಾತಾ ಮೇಳ
ಆಸ್ತಿ ತೆರಿಗೆ ಸಂಗ್ರಹಿಸುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಸ್ತಿ ತೆರಿಗೆ ವ್ಯಾಪ್ತಿಗೆ ಬಾರದ ವಸತಿ ಸಮುಚ್ಚಯಗಳಲ್ಲಿ ಖಾತಾ ಮೇಳ ಆಯೋಜನೆ ಮಾಡಲು ನಿರ್ಧರಿಸಿದೆ.
Published: 06th February 2022 12:13 PM | Last Updated: 06th February 2022 12:13 PM | A+A A-

ಗೌರವ್ ಗುಪ್ತ
ಬೆಂಗಳೂರು: ಆಸ್ತಿ ತೆರಿಗೆ ಸಂಗ್ರಹಿಸುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಸ್ತಿ ತೆರಿಗೆ ವ್ಯಾಪ್ತಿಗೆ ಬಾರದ ವಸತಿ ಸಮುಚ್ಚಯಗಳಲ್ಲಿ ಖಾತಾ ಮೇಳ ಆಯೋಜನೆ ಮಾಡಲು ನಿರ್ಧರಿಸಿದೆ.
ಆಸ್ತಿ ತೆರಿಗೆ ವ್ಯಾಪ್ತಿಗೆ ಬಾರದ ವಸತಿ ಸಮುಚ್ಛಯಗಳಲ್ಲಿ ಖಾತಾ ಮೇಳ ನಡೆಸಿ ಆಸ್ತಿ ತೆರಿಗೆ ವ್ಯಾಪ್ತಿಗೆ ತರಲು ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತರು ಸೂಚನೆ ನೀಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ವ್ಯಾಪ್ತಿಗೆ ಬಾರದ ವಸತಿ ಸಮುಚ್ಛಯಗಳಲ್ಲಿ ಖಾತಾ ಮೇಳ ಮಾಡಿ ಆಸ್ತಿ ತೆರಿಗೆ ವ್ಯಾಪ್ತಿಗೆ ತರಬೇಕು. ಈ ಪೈಕಿ ನಗರದಲ್ಲಿ ಪ್ರಾಯೋಗಿಕವಾಗಿ 20 ವಸತಿ ಸಮುಚ್ಛಯಗಳನ್ನು ಗುರುತಿಸಿ ಶೀಘ್ರದಲ್ಲಿ ಖಾತಾ ಮೇಳ ಆಯೋಜಿಸಲು ಮುಖ್ಯ ಆಯುಕ್ತರಾದ ಶ್ರೀ ಗೌರವ್ ಗುಪ್ತ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಬಂಧ ಬೆಂಗಳೂರು ಅಪಾರ್ಟ್ಮೆಂಟ್ಸ್ ಫೆಡರೇಷನ್ ಜೊತೆ ಇಂದು ನಡೆದ ವರ್ಚುಯಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆಗೆ ಪ್ರಮುಖ ಆದಾಯದ ಮೂಲ ಆಸ್ತಿ ತೆರಿಗೆಯಾಗಿದ್ದು, ಹೆಚ್ಚು ಆಸ್ತಿ ತೆರಿಗೆ ಸಂಗ್ರಹಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು. ಈ ಪೈಕಿ ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿರುವ ಎಲ್ಲಾ ಆಸ್ತಿಗಳನ್ನು ಗುರುತಿಸಿ, ತೆರಿಗೆ ವ್ಯಾಪ್ತಿಗೆ ತರಲು ಸೂಕ್ತ ಕ್ರಮವಹಿಸಬೇಕು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಲ್ಲಿ ತ್ವರಿತ ಗತಿಯಲ್ಲಿ ಖಾತಾ ಪ್ರಕ್ರಿಯೆಗಳು ಜಾರಿಯಾಗಬೇಕೆಂಬ ಉದ್ದೇಶದಿಂದ ಆಯಾ ವಲಯಗಳಿಗೆ ಖಾತಾ ನೀಡುವ ಜವಾಬ್ದಾರಿಯನ್ನು ವಿಕೇಂದ್ರಿಕರಣಗೊಳಿಸಲಾಗಿದೆ. ಈ ಸಂಬಂಧ ಖಾತೆ ನೀಡದೇ ಇರುವ ಕಟ್ಟಡಗಳನ್ನು ಗುರುತಿಸಿ, ಖಾತೆ ನೀಡುವ ಕೆಲಸ ಮಾಡಿದಾಗ ಆಸ್ತಿ ತೆರಿಗೆ ವ್ಯಾಪ್ತಿಗೆ ಹೆಚ್ಚು ಹೆಚ್ಚು ಆಸ್ತಿಗಳು ಸೇರ್ಪಡೆಯಾಗಿ ಗರಿಷ್ಟ ಪ್ರಮಾಣದಲ್ಲಿ ಆಸ್ತಿ ತೆರಿಗೆ ಪಾಲಿಕೆಗೆ ಬರಲಿದೆ ಎಂದು ತಿಳಿಸಿದರು.
ನಗರದಲ್ಲಿ ಒಂದು ವಸತಿ ಸಮುಚ್ಛಯದಲ್ಲಿನ ಎಲ್ಲಾ ಆಸ್ತಿಗಳಿಗೆ ಒಂದೇ ರೀತಿಯ ಖಾತೆಯಿರಬೇಕು. ಈ ಸಂಬಂಧ ಕಂದಾಯ ಅಧಿಕಾರಿಗಳು ವಸತಿ ಸಮುಚ್ಛಯ ಒಂದರಲ್ಲಿ ಯಾವ ಖಾತೆಗಳಿವೆ ಎಂಬುದನ್ನು ಪರಿಶೀಲಿಸಿ ಒಂದೇ ರೀತಿಯ ಖಾತೆ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ವಿಶೇಷ ಆಯುಕ್ತರು (ಕಂದಾಯ) ಡಾ. ದೀಪಕ್, ಎಲ್ಲಾ ವಲಯಗಳ ಜಂಟಿ/ಉಪ ಆಯುಕ್ತರುಗಳು, ಜಂಟಿ ಆಯುಕ್ತರು (ಕಂದಾಯ) ಹಾಗೂ ಉಪ ಆಯುಕ್ತರು (ಕಂದಾಯ), ಬೆಂಗಳೂರು ಅಪಾರ್ಟ್ಮೆಂಟ್ಸ್ ಫೆಡರೇಷನ್ ನ ಪದಾಧಿಕಾರಿಗಳು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.