ಶಾಲಾ- ಕಾಲೇಜುಗಳ ಮಕ್ಕಳಿಗೆ ಶೀಘ್ರದಲ್ಲಿಯೇ ಆತ್ಮರಕ್ಷಣಾ ತರಬೇತಿ ಪ್ರಾರಂಭ- ಮುಖ್ಯಮಂತ್ರಿ ಬೊಮ್ಮಾಯಿ
ಶಾಲಾ- ಕಾಲೇಜುಗಳ ಮಕ್ಕಳಿಗೆ ಶೀಘ್ರದಲ್ಲಿಯೇ ಆತ್ಮರಕ್ಷಣಾ ತರಬೇತಿ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Published: 06th February 2022 02:58 PM | Last Updated: 06th February 2022 03:25 PM | A+A A-

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಶಾಲಾ- ಕಾಲೇಜುಗಳ ಮಕ್ಕಳಿಗೆ ಶೀಘ್ರದಲ್ಲಿಯೇ ಆತ್ಮರಕ್ಷಣಾ ತರಬೇತಿ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ಇಂದು ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಿದ್ದ 'ಓಬವ್ವ ಆತ್ಮ ರಕ್ಷಣಾ ಕಲೆ ತರಬೇತಿ' ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ಆತ್ಮ ರಕ್ಷಣೆ ಪ್ರತಿಯೊಂದು ಜೀವ ಸಂಕುಲದ ಎಲ್ಲ ಪ್ರಾಣಿಗಳ, ಮಾನವರ ಗುಣಧರ್ಮಆತ್ಮರಕ್ಷಣೆಗೆ ಬೇಕಾಗಿರುವುದು ಆತ್ಮವಿಶ್ವಾಸ, ಯಾವ ವ್ಯಕ್ತಿಗೆ ಆತ್ಮವಿಶ್ವಾಸ ಇರುತ್ತದೆಯೋ ಅವನು ತನ್ನ ಆತ್ಮ ರಕ್ಷಣೆಯನ್ನು ಸಮರ್ಥವಾಗಿ ಮಾಡಲು ಸಾಧ್ಯ ಎಂದರು.
ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯ 50 ಸಾವಿರ ವಿದ್ಯಾರ್ಥಿನಿಯರಿಗೆ ತರಬೇತಿ ನೀಡುವ ಮಹತ್ವಾಕಾಂಕ್ಷೆ ಇದೆ. ಈ ಕಾರ್ಯಕ್ರಮಕ್ಕೆ ಹೆಸರಿನಲ್ಲಿಯೇ ಶಕ್ತಿ ತುಂಬಲು ಒನಕೆ ಓಬವ್ವನ ಹೆಸರಿಡಲಾಗಿದೆ.ಪೊಲೀಸ್ ತರಬೇತಿ ಶಾಲೆಗಳನ್ನು ಮಹಿಳಾ ಆತ್ಮರಕ್ಷಣಾ ತರಬೇತಿಗೆ ಬಳಕೆ ಮಾಡುವಂತೆ ಗೃಹ ಇಲಾಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಇಂದು ಮಾನ್ಯ ಮುಖ್ಯಮಂತ್ರಿ ಶ್ರೀ @BSBommai ಅವರು ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘಗಳ ಸಂಯುಕ್ತಾಶ್ರಯದಲ್ಲಿ ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಿದ್ದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ಶಾಲೆಗಳ ವಿದ್ಯಾರ್ಥಿನಿಯರಿಗೆ “ಓಬವ್ವ ಆತ್ಮ ರಕ್ಷಣಾ ಕಲೆ ತರಬೇತಿ”
— CM of Karnataka (@CMofKarnataka) February 6, 2022
1/2 pic.twitter.com/W2QqMLoGdP