ಹಿಜಾಬ್ ಪ್ರತಿಭಟನೆ ವೇಳೆ ಮಾರಕಾಸ್ತ್ರ ತಂದಿದ್ದ ಇಬ್ಬರ ಬಂಧನ
ಕುಂದಾಪುರ ಪದವಿಪೂರ್ವ ಕಾಲೇಜು ಬಳಿ ಶುಕ್ರವಾರ ಹಿಜಾಬ್ ಹಾಗೂ ಕೇಸರಿ ಶಾಲು ಧಾರಣೆ ವಿಚಾರದಲ್ಲಿ ನಡೆದ ಪ್ರತಿಭಟನೆಗೆ ಮಾರಕಾಸ್ತ್ರಗಳೊಂದಿಗೆ ಬಂದಿದ್ದ ಇಬ್ಬರು ವ್ಯಕ್ತಿಗಳನ್ನು ಕುಂದಾಪುರ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.
Published: 07th February 2022 08:37 AM | Last Updated: 07th February 2022 12:01 PM | A+A A-

ಬಂಧಿತ ಆರೋಪಿಗಳು
ಕುಂದಾಪುರ: ಕುಂದಾಪುರ ಪದವಿಪೂರ್ವ ಕಾಲೇಜು ಬಳಿ ಶುಕ್ರವಾರ ಹಿಜಾಬ್ ಹಾಗೂ ಕೇಸರಿ ಶಾಲು ಧಾರಣೆ ವಿಚಾರದಲ್ಲಿ ನಡೆದ ಪ್ರತಿಭಟನೆಗೆ ಮಾರಕಾಸ್ತ್ರಗಳೊಂದಿಗೆ ಬಂದಿದ್ದ ಇಬ್ಬರು ವ್ಯಕ್ತಿಗಳನ್ನು ಕುಂದಾಪುರ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.
ಬಂಧಿತರನ್ನು ಗಂಗೊಳ್ಳಿಯ ಅಬ್ದುಲ್ ಮಜೀದ್ (32) ಹಾಗೂ ರಜಬ್ (41) ಎಂದು ಗುರ್ತಿಸಲಾಗಿದೆ. ಇವರ ಜೊತೆಗಿದ್ದ ಇತರೆ ಆರೋಪಿಗಳಾದ ಖಲೀಲ್, ರಿಜ್ವಾನ್ ಹಾಗೂ ಇಫ್ತಿಕರ್ ಬಂಧನಕ್ಕೆ ಶೋಧ ನಡೆದಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಹಿಜಾಬ್ ವಿವಾದ: ಸಮವಸ್ತ್ರವಿಲ್ಲದೆ, ಶಾಲೆ ಪ್ರವೇಶವಿಲ್ಲ; ಸಚಿವ ಬಿಸಿ ನಾಗೇಶ್
ಪ್ರತಿಭಟನಾ ಸ್ಥಳಕ್ಕೆ ಐದಾರು ಮಂದಿ ಮಾರಕಾಸ್ತ್ರಗಳೊಂದಿಗೆ ಬಂದಿರುವ ಬಗ್ಗೆ ಖಚಿತ ಮಾಹಿತಿ ಕಲೆಹಾಕಿದ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.