ಹಿಜಾಬ್ Vs ಕೇಸರಿ: ರಾಜ್ಯಾದ್ಯಂತ ನಾಳೆಯಿಂದ ಮೂರು ದಿನ ಹೈಸ್ಕೂಲ್, ಕಾಲೇಜ್ ಗಳಿಗೆ ರಜೆ ಘೋಷಿಸಿದ ಸರ್ಕಾರ
ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಇದೀಗ ರಾಜ್ಯಾದ್ಯಂತ ವ್ಯಾಪಿಸಿದ್ದು, ಹಲವು ಕಡೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರ್ಕಾರ ನಾಳೆಯಿಂದ...
Published: 08th February 2022 04:54 PM | Last Updated: 08th February 2022 05:08 PM | A+A A-

ಕೆಎಂ ಕರಿಯಪ್ಪ ಕಾಲೇಜಿನ ವಿದ್ಯಾರ್ಥಿಗಳು
ಬೆಂಗಳೂರು: ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಇದೀಗ ರಾಜ್ಯಾದ್ಯಂತ ವ್ಯಾಪಿಸಿದ್ದು, ಹಲವು ಕಡೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರ್ಕಾರ ನಾಳೆಯಿಂದ ಮೂರು ದಿನ ಹೈಸ್ಕೂಲ್ ಹಾಗೂ ಕಾಲೇಜ್ ಗಳಿಗೆ ರಜೆ ಘೋಷಿಸಿದೆ.
ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ನಾನು ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಾಲಾ-ಕಾಲೇಜುಗಳ ಆಡಳಿತ ಮಂಡಳಿ ಹಾಗೂ ಕರ್ನಾಟಕದ ಜನತೆಗೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಕಾಲ ಎಲ್ಲಾ ಪ್ರೌಢಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ನೀಡಲು ನಾನು ಆದೇಶಿಸಿದ್ದೇನೆ. ಸಂಬಂಧಪಟ್ಟವರೆಲ್ಲರೂ ಸಹಕರಿಸಬೇಕಾಗಿ ವಿನಂತಿ ಎಂದು ಮುಖ್ಯಮಂತ್ರಿ ಬವಸರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ.
ಇದನ್ನು ಓದಿ: ಹಿಜಾಬ್- ಕೇಸರಿ ಶಾಲು ವಿವಾದ: ಶಿವಮೊಗ್ಗದಲ್ಲಿ ಕಲ್ಲು ತೂರಾಟ, ನಿಷೇಧಾಜ್ಞೆ ಜಾರಿ
ರಾಜ್ಯದ ಹಲವು ಕಾಲೇಜುಗಳಲ್ಲಿ ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ಹೆಚ್ಚಾದ ಕಾರಣ ಮತ್ತು ಹೈಕೋರ್ಟ್ ನಲ್ಲಿ ವಿವಾದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ರಾಜ್ಯಾದ್ಯಂತ ಸರ್ಕಾರ ಹಾಗೂ ಖಾಸಗಿ ಪದವಿಪೂರ್ವ ಕಾಲೇಜ್ ಗಳಿಗೆ ಮೂರು ದಿನ ರಜೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರು ಹೇಳಿದ್ದಾರೆ.
I appeal to all the students, teachers and management of schools and colleges as well as people of karnataka to maintain peace and harmony. I have ordered closure of all high schools and colleges for next three days. All concerned are requested to cooperate.
— Basavaraj S Bommai (@BSBommai) February 8, 2022