ಹಿಜಾಬ್ ವಿವಾದ: ಬಾಗಲಕೋಟೆ, ಶಿವಮೊಗ್ಗದಲ್ಲಿ ಕಲ್ಲು ತೂರಾಟ; ವಿವಿಧೆಡೆ ಪರಿಸ್ಥಿತಿ ಉದ್ವಿಗ್ನ!
ಕಳೆದೊಂದು ವಾರದಿಂದ ರಾಜ್ಯದಲ್ಲಿ ತಲೆದೋರಿರುವ 'ಹಿಜಾಬ್ ವಿವಾದ' ಸದ್ಯಕ್ಕೆ ತಣ್ಣಾಗಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇಂದು ಕೂಡಾ ವಿವಿಧೆಡೆ ಹಿಜಾಬ್ ಪರ ಹಾಗೂ ವಿರುದ್ಧವಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ ನಡೆದಿದೆ.
Published: 08th February 2022 12:22 PM | Last Updated: 08th February 2022 01:35 PM | A+A A-

ಉಡುಪಿ, ಬಾಗಲಕೋಟೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಬೆಂಗಳೂರು: ಕಳೆದೊಂದು ವಾರದಿಂದ ರಾಜ್ಯದಲ್ಲಿ ತಲೆದೋರಿರುವ 'ಹಿಜಾಬ್ ವಿವಾದ' ಸದ್ಯಕ್ಕೆ ತಣ್ಣಾಗಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇಂದು ಕೂಡಾ ವಿವಿಧೆಡೆ ಹಿಜಾಬ್ ಪರ ಹಾಗೂ ವಿರುದ್ಧವಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸಿದ್ದು, ಶಿವಮೊಗ್ಗ, ಬಾಗಲಕೋಟೆಯಲ್ಲಿ ಕಲ್ಲು ತೂರಾಟ, ಲಾಠಿಚಾರ್ಜ್ ಆಗಿರುವ ಬಗ್ಗೆ ವರದಿಯಾಗಿದೆ.
ಶಿವಮೊಗ್ಗದ ಬಾಪೂಜಿನಗರದ ಸರ್ಕಾರಿ ಡಿಗ್ರಿ ಕಾಲೇಜಿನಲ್ಲಿ ಮಂಗಳವಾರ ದುಷ್ಕರ್ಮಿಗಳು ವಿದ್ಯಾರ್ಥಿಗಳತ್ತ ಕಲ್ಲು ತೂರಾಟ ನಡೆಸಿದ್ದರಿಂದ ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗಿತು. ಕಲ್ಲು ತೂರಾಟದಿಂದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಉನ್ನತ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿ ಮೇಲೆ ನಿಗಾ ವಹಿಸಿದ್ದಾರೆ. ಯಾವುದೇ ಅಹಿತರ ಘಟನೆ ನಡೆಯದಂತೆ ಪೊಲೀಸ್ ಪಡೆ ನಿಯೋಜಿಸಲಾಗಿದೆ.
ಇದನ್ನೂ ಓದಿ: ಹಿಜಾಬ್ ವಿವಾದದ ಹಿಂದೆ ಕಾಣದ ಕೈಗಳ ಕೈವಾಡ: ಗೃಹ ಸಚಿವ ಆರಗ ಜ್ಞಾನೇಂದ್ರ
ಬುಧವಾರ ತರಗತಿ ಆರಂಭ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಎಸ್ಪಿ ಬಿಎಂ ಲಕ್ಷ್ಮಿ ಪ್ರಸಾದ್ ತಿಳಿಸಿದ್ದಾರೆ. ಹಿಜಾಬ್ ವಿವಾದ ಶಿವಮೊಗ್ಗ ಜಿಲ್ಲೆಗೂ ವ್ಯಾಪಿಸಿದ್ದು, ಅನೇಕ ಕಾಲೇಜ್ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಹಿಜಾಬ್- ಕೇಸರಿ ಶಾಲು ಧರಿಸಲು ಅವಕಾಶ ನೀಡುವುದಿಲ್ಲ, ಸಮವಸ್ತ್ರದಲ್ಲಿ ತರಗತಿಯಲ್ಲಿ ಪಾಲ್ಗೊಳ್ಳುವಂತೆ ಕಾಲೇಜ್ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಸೂಚಿಸಿದೆ.
ಬಾಗಲಕೋಟೆ ಜಿಲ್ಲೆ ಬನಹಟ್ಟಿ ಪಟ್ಟಣದಲ್ಲಿ ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿದ ಹಿನ್ನೆಲೆಯಲ್ಲಿ ಸಿಡಿದೆದ್ದ ನೂರಾರು ಮುಸ್ಲಿಂ ಪುರುಷರು ಕಾಲೇಜ್ ಹಾಗೂ ವಿದ್ಯಾರ್ಥಿಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಬಗ್ಗೆ ವರದಿಯಾಗಿದೆ.
Enraged Muslims (men) pelted stones on college & students in Banahatti town after students clad with saffron stoles didn't allow Muslim girls to enter college in burka & hijab. @XpressBengaluru @santwana99 @ramupatil_TNIE @naushadbijapur @AshwiniMS_TNIE @CCPatilBJP @SpBagalkote pic.twitter.com/4IdpzHPVej
— Mahesh M Goudar। ಮಹೇಶ್ ಮ ಗೌಡರ (@MahiPEN_TNIE) February 8, 2022
ಉಡುಪಿಯ ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜ್ ಬಳಿ ಮಂಗಳವಾರ ಹೈಡ್ರಾಮವೇ ನಡೆಯಿತು. ಪ್ರಿನ್ಸಿಪಾಲ್ ಆದೇಶದ ವಿರುದ್ಧ ಹಿಜಾಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸೆಡ್ಡು ಹೊಡೆದ ಹಿಂದೂ ವಿದ್ಯಾರ್ಥಿನಿಯರು ತಲೆಗೆ ಕೇಸರಿ ಟರ್ಬನ್ಸ್ ಹಾಗೂ ಶಾಲು ಧರಿಸಿ ಕಾಲೇಜಿಗೆ ಬಂದರು. ಪರಸ್ಪರ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ತರಗತಿ ಒಳಗಡೆ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಮುಸ್ಲಿಂ ವಿದ್ಯಾರ್ಥಿನಿಯರು ಒತ್ತಾಯಿಸಿದರು. ಪರಿಸ್ಥಿತಿ ಬಿಗಡಾಯಿಸಿದ್ದರಿಂದ ಕಾಲೇಜ್ ಆಡಳಿತ ಮಂಡಳಿಗೆ ಇಂದು ಕಾಲೇಜಿಗೆ ರಜೆ ನೀಡಿತು. ಆದಾಗ್ಯೂ, ಮನೆಗೆ ತೆರಳದ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರೆಸಿದರು.
Students wearing hijab and saffron shawl at loggerheads at MGM College, Udupi on Tuesday@XpressBengaluru @KannadaPrabha #HijabIsIndividualRight #Hijab pic.twitter.com/uVdHJjo15l
— Prakash Samaga (@prakash_TNIE) February 8, 2022
ಹಿಜಾಬ್ ವಿವಾದವನ್ನು ಸರ್ಕಾರ ದೊಡ್ಡದಾಗಿ ಮಾಡುವ ಮೂಲಕ ಸರ್ಕಾರ ತಮ್ಮ ಭವಿಷ್ಯವನ್ನು ಹಾಳು ಮಾಡುತ್ತಿದೆ ಎಂದು ಕುಂದಾಪುರದ ವಿದ್ಯಾರ್ಥಿನಿಯರು ಹೇಳಿದರು. ಕಲ್ಲುತೂರಾಟದಲ್ಲಿ ತೊಡಗಿರುವ ವಿದ್ಯಾರ್ಥಿಗಳು ಹಾಗೂ ದುಷ್ಕರ್ಮಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ. ಕೋವಿಡ್ ನಿಂದಾಗಿ ಈಗಾಗಲೇ ಎರಡು ವರ್ಷ ವ್ಯರ್ಥವಾಗಿದ್ದು, ಶಾಂತಿ ಕಾಪಾಡುವಂತೆ ಅವರು ಮನವಿ ಮಾಡಿದ್ದಾರೆ.
ಈ ಮಧ್ಯೆ ಇಂದು ಹಿಜಾಬ್ ವಿವಾದ ಕುರಿತ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯಲಿದ್ದು, ತೀರ್ಪು ಬಂದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನವದೆಹಲಿಯಲ್ಲಿಂದು ತಿಳಿಸಿದ್ದಾರೆ.