
ಸಾಂದರ್ಭಿಕ ಚಿತ್ರ
ಚಿತ್ರದುರ್ಗ: ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಸಾವ್ನಪ್ಪಿದ್ದಾರೆ.
ಜಿಲ್ಲೆಯ ಹಿರಿಯೂರು ತಾಲೂಕಿನ ಬೀರೇನಹಳ್ಳಿ ಗ್ರಾಮದ ಬಳಿ ಮಂಗಳವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಹಿರಿಯೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತರು ವಿಶಾಲಾಕ್ಷಿ (70), ರೇಣುಕಾದೇವಿ (39) ಮತ್ತು ಸುಧೀಕ್ಷ (17). ಗಾಯಗೊಂಡ ಪ್ರತೀಕ್ಷಾ ಹಿರಿಯೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸಂತ್ರಸ್ತರು ತಮ್ಮ ಸಂಬಂಧಿಕರ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭದ್ರಾವತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರು ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.