ಹಿಜಾಬ್ Vs ಕೇಸರಿ ಶಾಲು: ದಾವಣಗೆರೆ, ಹರಿಹರದಲ್ಲಿ ಫೆ.11ರವರೆಗೆ ನಿಷೇಧಾಜ್ಞೆ ವಿಸ್ತರಣೆ
ಹಿಜಾಬ್ ಮತ್ತು ಕೇಸರಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದಾವಣಗೆರೆ ಮತ್ತು ಹರಿಹರದಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಫೆಬ್ರವರಿ 11ರ ವರೆಗೆ ವಿಸ್ತರಿಸಲಾಗಿದೆ.
Published: 09th February 2022 08:20 PM | Last Updated: 09th February 2022 08:20 PM | A+A A-

ಹಿಜಾಬ್ Vs ಕೇಸರಿ ಶಾಲು
ದಾವಣಗೆರೆ: ಹಿಜಾಬ್ ಮತ್ತು ಕೇಸರಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದಾವಣಗೆರೆ ಮತ್ತು ಹರಿಹರದಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಫೆಬ್ರವರಿ 11ರ ವರೆಗೆ ವಿಸ್ತರಿಸಲಾಗಿದೆ.
ದಾವಣಗೆರೆ ಮತ್ತು ಹರಿಹರದಲ್ಲಿ ಐಪಿಸಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಅದನ್ನು
ಫೆಬ್ರವರಿ 11 ರ ಮಧ್ಯರಾತ್ರಿಯವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಮಹಾಂತೇಶ ಬಿಳಗಿ ಅವರು ಆದೇಶ ಹೊರಡಿಸಿದ್ದಾರೆ.
ಇದನ್ನು ಓದಿ: ಹಿಜಾಬ್ ವಿವಾದ: ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ವರ್ಗಾಯಿಸಿದ ಏಕಸದಸ್ಯ ಪೀಠ
ಹಿಂದಿನ ಆದೇಶದಲ್ಲಿ ಬುಧವಾರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಇದೀಗ ಅದನ್ನು ಫೆಬ್ರವರಿ 11ರ ವರೆಗೆ ವಿಸ್ತರಿಸಲಾಗಿದೆ.
ದಾವಣಗೆರೆ ನಗರದಲ್ಲಿ ಮತ್ತು ಹರಿಹರದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿದ್ದರು.