ಬಾಗಲಕೋಟೆ: ಮಸೀದಿ ಬಳಿ 'ಜೈ ಶ್ರೀರಾಮ್' ಘೋಷಣೆ ಕೂಗಿ ಗಲಾಟೆ ನಡೆಸಿದ ಯುವಕರ ಬಂಧನ
ನವನಗರದ ಜಾಮಿಯಾ ಮಸೀದಿ ಸುತ್ತ ಮುತ್ತ ಯುವಕರ ಗುಪೊಂದು ತಮ್ಮ ದ್ವಿಚಕ್ರ ವಾಹನಗಳ ಮೇಲೆ ಕೇಸರಿ ಧ್ವಜ ಕಟ್ಟಿಕೊಂಡು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರಿಂದ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
Published: 10th February 2022 08:51 AM | Last Updated: 10th February 2022 01:28 PM | A+A A-

ಸಾಂದರ್ಭಿಕ ಚಿತ್ರ
ಬಾಗಲಕೋಟೆ: ನವನಗರದ ಜಾಮಿಯಾ ಮಸೀದಿ ಸುತ್ತ ಮುತ್ತ ಯುವಕರ ಗುಪೊಂದು ತಮ್ಮ ದ್ವಿಚಕ್ರ ವಾಹನಗಳ ಮೇಲೆ ಕೇಸರಿ ಧ್ವಜ ಕಟ್ಟಿಕೊಂಡು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರಿಂದ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಮಸೀದಿ ಬಳಿ ಗಲಾಟೆ ಮಾಡಿದ 8 ಯುವಕರನ್ನು ಬಂಧಿಸಿದರು.
ಇದನ್ನೂ ಓದಿ: ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಪೊಲೀಸರಿಂದ ಸ್ವಯಂ ಪ್ರೇರಿತ ದೂರು ದಾಖಲು, 18 ಮಂದಿ ಬಂಧನ
ಹಿಂದೂ ಸಂಘಟನೆಗಳ ಸದಸ್ಯರ ಮೇಲೆ ಹಲ್ಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಕೆಲ ವ್ಯಕ್ತಿಗಳನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ.