ವಿಧಾನಸಭೆ ಅಧಿವೇಶನ ವೇಳೆ ಪ್ರತಿಭಟನೆ ನಡೆಸಲು ರಾಜ್ಯ ಸಚಿವಾಲಯ ಸಿಬ್ಬಂದಿ ಯೋಜನೆ
ರಾಜ್ಯ ಸರ್ಕಾರ ನಿವೃತ್ತ ನೌಕರರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸಚಿವಾಲಯ ನೌಕರರ ಸಂಘದ ಸದಸ್ಯರು ಫೆ.14ರಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
Published: 10th February 2022 08:01 AM | Last Updated: 10th February 2022 01:23 PM | A+A A-

ವಿಧಾನಸೌಧ
ಬೆಂಗಳೂರು: ರಾಜ್ಯ ಸರ್ಕಾರ ನಿವೃತ್ತ ನೌಕರರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸಚಿವಾಲಯ ನೌಕರರ ಸಂಘದ ಸದಸ್ಯರು ಫೆ.14ರಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಸಚಿವಾಲಯ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸೆಕ್ಷನ್ ಆಫೀಸರ್‌ಗಳನ್ನು ಬೇರೆ ಇಲಾಖೆಗಳಿಗೆ ಡೆಪ್ಯೂಟೇಶನ್ ಮೇಲೆ ಹೋಗಲು ಅವಕಾಶ ಮಾಡಿಕೊಡಬೇಕೆಂದು ಅವರು ಕೋರಿದ್ದಾರೆ. ಇದರಿಂದ ಕಲಾಪಕ್ಕೆ ಅಡ್ಡಿಯಾಗಬಹುದು.
ಸಚಿವಾಲಯದಲ್ಲಿ ಡೆಪ್ಯೂಟೇಶನ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ಅವರ ಸೇವಾ ಅವಧಿ ಪೂರ್ಣಗೊಂಡಿದ್ದರೆ ಅವರ ಮಾತೃ ಇಲಾಖೆಗೆ ಕಳುಹಿಸಬೇಕು ಎಂದು ಸಂಘದ ಸದಸ್ಯರು ಹೇಳಿಕೆಯ ಮೂಲಕ ಒತ್ತಾಯಿಸಿದ್ದಾರೆ.
ಆಡಳಿತಾತ್ಮಕ ಸುಧಾರಣೆಗಳ ಹೆಸರಿನಲ್ಲಿ ಸರ್ಕಾರವು ಸಚಿವಾಲಯದ ಒಳಗೆ ಯಾವುದೇ ಇಲಾಖೆಯ ಹುದ್ದೆಗಳನ್ನು ತೆಗೆದುಹಾಕಬಾರದು ಅಥವಾ ಮುಚ್ಚಬಾರದು ಎಂದು ಅವರು ಹೇಳಿದ್ದಾರೆ.