ಹಿಜಾಬ್ ವಿವಾದ: ಕಾಲೇಜು ಪುನಾರಂಭ ಕುರಿತ ನಿರ್ಧಾರ ಫೆ.14 ಕ್ಕೆ- ಶಿಕ್ಷಣ ಸಚಿವ
ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿರುವ ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳನ್ನು ಪುನಾರಂಭಗೊಳಿಸುವ ಕುರಿತು ಫೆ.14 ರಂದು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.
Published: 11th February 2022 08:30 PM | Last Updated: 12th February 2022 01:30 PM | A+A A-

ಬಿಸಿ ನಾಗೇಶ್
ಬೆಂಗಳೂರು: ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿರುವ ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳನ್ನು ಪುನಾರಂಭಗೊಳಿಸುವ ಕುರಿತು ಫೆ.14 ರಂದು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.
10 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಫೆ.14 ರಿಂದ ಶಾಲೆಗಳನ್ನು ತೆರೆಯುವುದಕ್ಕೆ ಗುರುವಾರದಂದು ನಿರ್ಧರಿಸಲಾಗಿತ್ತು. ಈ ಬಳಿಕ ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳನ್ನು ತೆರೆಯಲು ನಿರ್ಧಾರ ಕೈಗೊಳ್ಳಲಾಗಿತ್ತು.
ಸೋಮವಾರದಿಂದ ಪ್ರೌಢಶಾಲೆಗಳು ಪ್ರಾರಂಭವಾಗಲಿದ್ದು, ಅದೇ ದಿನದಂದು ಸಂಜೆ ಸಿಎಂ ಪಿಯು ಹಾಗೂ ಪದವಿ ಕಾಲೇಜುಗಳ ಪ್ರಾರಂಭಕ್ಕೆ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎಂದು ನಾಗೇಶ್ ತಿಳಿಸಿದ್ದಾರೆ.
ಪ್ರಕರಣ ಹೈಕೋರ್ಟ್ ಅಂಗಳದಲ್ಲಿದ್ದು, ಶೈಕ್ಷಣಿಕ ಸಂಸ್ಥೆಗಳನ್ನು ಪುನಾರಂಭ ಮಾಡುವಂತೆ ಉಚ್ಚ ನ್ಯಾಯಾಲಯ ಮಧ್ಯಂತರ ಆದೇಶದಲ್ಲಿ ಸರ್ಕಾರಕ್ಕೆ ಸೂಚನೆ ನೀಡಿದೆ. ಅಷ್ಟೇ ಅಲ್ಲದೇ ಮುಂದಿನ ಆದೇಶದವರೆಗೂ ವಿದ್ಯಾರ್ಥಿಗಳು ಕೇಸರಿ ಶಾಲು, ಹಿಜಾಬ್ ಧರಿಸಿ ಅಥವಾ ಧಾರ್ಮಿಕ ವಿಷಯಗಳನ್ನು ಪ್ರತಿನಿಧಿಸುವ ಅಂಶಗಳನ್ನು ತರಗತಿಗಳ ಒಳಗೆ ಹಾಕಿಕೊಂಡು ಹೋಗುವಂತಿಲ್ಲ ಎಂದು ತಿಳಿಸಿದೆ.
ಹಿಜಾಬ್ ಪರ-ವಿರೋಧದ ಪ್ರತಿಭಟನೆಗಳು ತೀವ್ರಗೊಂಡು ಹಿಂಸಾಚಾರ ಉಂಟಾಗುವ ಲಕ್ಷಣವಿದ್ದ ಹಿನ್ನೆಲೆಯಲ್ಲಿ ಸರ್ಕಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿತ್ತು.