ಹಿಜಾಬ್ ಬೆನ್ನಲ್ಲೇ ಮತ್ತೊಂದು ರಗಳೆ: ಬಾಗಲಕೋಟೆ, ಮಂಗಳೂರಿನ ಶಾಲೆಯಲ್ಲಿ ವಿದ್ಯಾರ್ಥಿಗಳ 'ನಮಾಜ್' ವಿಡಿಯೋ ವೈರಲ್
ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಸಂಘರ್ಷದ ಬೆನ್ನಲ್ಲೇ, ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗಿದೆ.
Published: 12th February 2022 02:15 PM | Last Updated: 12th February 2022 05:26 PM | A+A A-

ಬಾಗಲಕೋಟೆ ಶಾಲೆಯಲ್ಲಿ ವಿದ್ಯಾರ್ಥಿಗಳ ನಮಾಜ್
ಬಾಗಲಕೋಟೆ: ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಸಂಘರ್ಷದ ಬೆನ್ನಲ್ಲೇ, ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗಿದೆ.
6ನೇ ತರಗತಿಯಲ್ಲಿ ಓದುತ್ತಿರುವ ಹಿಜಾಬ್ ಧರಿಸಿರುವ ಒಟ್ಟು ಆರು ವಿದ್ಯಾರ್ಥಿಗಳು ಶಾಲೆಯ ಆವರಣದಲ್ಲಿ ಊಟದ ಸಮಯದಲ್ಲಿ ನಮಾಜ್ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಈ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ಈ ಘಟನೆ ವರದಿಯಾಗಿದೆ. ಶನಿವಾರ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ಬಳಿಕ ಈ ವಿಚಾರ ಬೆಳಕಿಗೆ ಬಂದಿದೆ.
ವಿಡಿಯೋ ವೈರಲ್ ಆದ ತಕ್ಷಣ ಸಾರ್ವಜನಿಕ ಶಿಕ್ಷಣ ಇಲಾಖೆ (ಡಿಪಿಐ) ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪ್ರಾಥಮಿಕ ವಿಚಾರಣೆ ನಡೆಸಿದರು. ಶಾಲೆಯಲ್ಲಿ ಊಟದ ವೇಳೆಯಲ್ಲಿ ಪ್ರಾರ್ಥನೆ ಸಲ್ಲಿಸುವ ವಿದ್ಯಾರ್ಥಿಗಳ ಬಗ್ಗೆ ತಮಗೆ ಯಾವುದೇ ಇದರ ಅರಿವಿಲ್ಲ ಎಂದು ಶಾಲೆಯ ಶಿಕ್ಷಕರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶಾಲೆಯ ಮುಖ್ಯೋಪಾಧ್ಯಾಯ ಹೆಚ್ ವೈ ಕರ್ಕೂರ್, ಶಾಲಾ ಆವರಣದಲ್ಲಿ ನಮಾಜ್ ಮಾಡದಂತೆ ವಿದ್ಯಾರ್ಥಿಗಳಿಗೆ ಮೊದಲೇ ಎಚ್ಚರಿಕೆ ನೀಡಿದ್ದೆ. ಈ ಶಾಲೆಯಲ್ಲಿ 232 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಶಾಲೆಯ ಶಿಕ್ಷಕರು ಊಟದ ಸಮಯದಲ್ಲಿ ಉಳಿದ ವಿದ್ಯಾರ್ಥಿಗಳಿಗೆ ಊಟ ಬಡಿಸುತ್ತಿದ್ದಾಗ ವಿದ್ಯಾರ್ಥಿಗಳು ಪ್ರಾರ್ಥನೆ ಸಲ್ಲಿಸಿದ್ದಾರೆ.
In the midst of #Hijab & #Saffronshawl row a purported video of six students of Class 6 were seen offering Namaz in the premises of Mulana Azad English Medium School in Ilkal. The video has went viral. @XpressBengaluru @santwana99 @ramupatil_TNIE @naushadbijapur @AshwiniMS_TNIE pic.twitter.com/WukrZ1BuR1
— Mahesh M Goudar। ಮಹೇಶ್ ಮ ಗೌಡರ (@MahiPEN_TNIE) February 12, 2022
ಆರು ವಿದ್ಯಾರ್ಥಿಗಳು ಸಿಬ್ಬಂದಿ ಅನುಮತಿ ತೆಗೆದುಕೊಂಡಿಲ್ಲ ಅಥವಾ ಶಾಲೆಯ ಆವರಣದಲ್ಲಿ ನಮಾಜ್ ಮಾಡುವ ಬಗ್ಗೆ ನಮಗೆ ತಿಳಿಸಿಲ್ಲ. ಮುಂದೆ ಈ ರೀತಿಯ ಘಟನೆಗಳು ಶಾಲೆಯಲ್ಲಿ ನಡೆಯದಂತೆ ನೋಡಿಕೊಳ್ಳುತ್ತೇವೆ’ ಎಂದು ಮುಖ್ಯಶಿಕ್ಷಕ ಕರ್ಕೂರ್ ತಿಳಿಸಿದ್ದಾರೆ.
ಇದನ್ನೂ ಓದಿ: ಹಿಜಾಬ್ ವಿವಾದ: ಬೆಂಗಳೂರಿನ ವಿದ್ಯಾಸಾಗರ್ ಶಾಲೆಯ ಶಿಕ್ಷಕಿ ಶಶಿಕಲಾ ಅಮಾನತು
ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳು ಪ್ರಾರ್ಥನೆ ಸಲ್ಲಿಸುತ್ತಿರುವ ವಿಷಯ ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ವಿಸ್ತೃತ ವರದಿ ನೀಡುವಂತೆ ಇಳಕಲ್ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚಿಸಿದ್ದೇನೆ. ವರದಿ ಆಧರಿಸಿ ಶಾಲಾ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದು ಶಾಲಾ ಶಿಕ್ಷಣ ಉಪನಿರ್ದೇಶಕ ಶ್ರೀಶೈಲ್ ಬಿರಾದಾರ್ ಹೇಳಿದ್ದಾರೆ.
ಇದರ ಜೊತೆಗೆ ಕಡಬ ತಾಲೂಕಿನ ಅಂಕತ್ತಡ್ಕ ಸರ್ಕಾರಿ ಶಾಲೆಯ ಮಕ್ಕಳು ನಮಾಜ್ ಮಾಡುತ್ತಿರುವ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಳೆದ ಮೂರು ವಾರಗಳಿಂದ ಶಾಲಾ ಕೊಠಡಿಯಲ್ಲಿ ವಿದ್ಯಾರ್ಥಿಗಳು ನಮಾಜ್ ಮಾಡುತ್ತಿದ್ದಾರೆ. 6 ನೇ ಮತ್ತು 7 ನೇ ತರಗತಿ ಮಕ್ಕಳು ಪ್ರಾರ್ಥನೆಯಲ್ಲಿ ತೊಡಗಿದ್ದಾರೆ. ನಮಾಜ್ ಮಾಡುತ್ತಿದ್ದರೂ ಶಾಲಾ ಸಿಬ್ಬಂದಿ ಗಮನ ಹರಿಸಿಲ್ಲ ಎನ್ನಲಾಗಿದೆ.
ಫೆಬ್ರವರಿ 4 ರಂದು ನಡೆದ ಈ ಘಟನೆಯು ಕೆಲವು ದಿನಗಳ ನಂತರ ಕ್ಲಿಪ್ ವೈರಲ್ ಆಗಿದ್ದು, ಸ್ಥಳೀಯ ಜನರು ಆಕ್ಷೇಪ ವ್ಯಕ್ತ ಪಡಿಸಿದ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಶುಕ್ರವಾರ ಶಾಲೆಗೆ ಭೇಟಿ ನೀಡಿದ್ದರು.
ತರಗತಿಯೊಳಗೆ ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳದಂತೆ ವಿದ್ಯಾರ್ಥಿಗಳಿಗೆ ಸೂಚಿಸಿರುವುದಾಗಿ ಶಾಲೆಯ ಶಿಕ್ಷಕರು ತಿಳಿಸಿದ್ದಾರೆ. ಸಂಪನ್ಮೂಲ ವ್ಯಕ್ತಿಗೆ ಶಾಲೆಗೆ ಭೇಟಿ ನೀಡಿ ಘಟನೆಯ ವರದಿಯನ್ನು ತಕ್ಷಣ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಬ್ಲಾಕ್ ಶಿಕ್ಷಣಾಧಿಕಾರಿ ಸಿ.ಲೋಕೇಶ್ ತಿಳಿಸಿದ್ದಾರೆ.