ದಲಿತರ ಮೇಲಿನ ದೌರ್ಜನ್ಯ ಪ್ರಕರಣ: ವಿಶೇಷ ನ್ಯಾಯಾಲಯ ರಚಿಸುವಂತೆ ಸರ್ಕಾರಕ್ಕೆ ಸಚಿವ ನಾರಾಯಣ ಸ್ವಾಮಿ ಸಲಹೆ
ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿಕ್ಷೆಯ ಪ್ರಮಾಣ ಕೇವಲ ಶೇ.3ರಷ್ಟಿರುವ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವಂತೆ ಸರ್ಕಾರಕ್ಕೆ ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅವರು ಸಲಹೆ ನೀಡಿದ್ದಾರೆ.
Published: 12th February 2022 08:08 AM | Last Updated: 12th February 2022 11:56 AM | A+A A-

ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ
ಬೆಂಗಳೂರು: ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿಕ್ಷೆಯ ಪ್ರಮಾಣ ಕೇವಲ ಶೇ.3ರಷ್ಟಿರುವ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವಂತೆ ಸರ್ಕಾರಕ್ಕೆ ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅವರು ಸಲಹೆ ನೀಡಿದ್ದಾರೆ.
ಶುಕ್ರವಾರ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ನಂತರ ಅವರು, “ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದರೂ, 6,000 ಕ್ಕೂ ಹೆಚ್ಚು ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಉಳಿದಿವೆ. 16 ಇಲಾಖೆಗಳಲ್ಲಿ ವಿವಿಧ ಕಲ್ಯಾಣ ಯೋಜನೆಗಳಿಗೆ ಕೇಂದ್ರದಿಂದ 6,392 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಇದರಲ್ಲಿ 4,519 ರೂ. ಬಿಡುಗಡೆಯಾಗಿದೆ, ಈಗಾಗಲೇ ರೂ.3,984 ಖರ್ಚು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ಚಿಕ್ಕಮಗಳೂರು: ದಲಿತ ಯುವತಿಯೊಂದಿಗೆ ವ್ಯಕ್ತಿ ವಿವಾಹ, ಸ್ವಜಾತಿಯವರಿಂದಲೇ ಕುಟುಂಬಕ್ಕೆ ಬಹಿಷ್ಕಾರ
‘ಗಂಗಾ ಕಲ್ಯಾಣ’ ಯೋಜನೆಯಡಿ ಸುಮಾರು 57,000 ಎಸ್‌ಸಿ ಮತ್ತು ಎಸ್‌ಟಿಗಳು ಪ್ರಯೋಜನ ಪಡೆದಿದ್ದು, ಹೆಚ್ಚಿನ ಫಲಾನುಭವಿಗಳಿರುವುದರಿಂದ ಹೆಚ್ಚಿನ ಅನುದಾನಕ್ಕಾಗಿ ಹೊಸ ಪ್ರಸ್ತಾವನೆಯನ್ನು ಕಳುಹಿಸಲು ರಾಜ್ಯಕ್ಕೆ ತಿಳಿಸಲಾಗಿದೆ. ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದಂತೆ, ತಾಂತ್ರಿಕ ದೋಷಗಳಿಂದಾಗಿ ಅವರಲ್ಲಿ ಹೆಚ್ಚಿನವರು ನೇರ ಫಲಾನುಭವಿ ವರ್ಗಾವಣೆ (ಡಿಬಿಟಿ) ಯೋಜನೆಯಡಿ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿಲ್ಲ. ಈ ಬಗ್ಗೆ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.