ಧಾರವಾಡ: ಹಿರಿಯ ಸಾಹಿತಿ ಡಾ. ಚೆನ್ನವೀರ ಕಣವಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಆಸ್ಪತ್ರೆಗೆ ಭೇಟಿ ಡಾ. ಚನ್ನವೀರ ಕಣವಿ ಅವರ ಆರೋಗ್ಯ ವಿಚಾರಿಸಿದರು. ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Published: 14th February 2022 12:00 AM | Last Updated: 14th February 2022 12:02 AM | A+A A-

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಧಾರವಾಡ: ಹಿರಿಯ ಸಾಹಿತಿ ಡಾ. ಚನ್ನವೀರ ಕಣವಿ ಅನಾರೋಗ್ಯದಿಂದ ಧಾರವಾಡದ ಸತ್ತೂರಿನ ಎಸ್ .ಡಿ.ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಆಸ್ಪತ್ರೆಗೆ ಭೇಟಿ ಡಾ. ಚನ್ನವೀರ ಕಣವಿ ಅವರ ಆರೋಗ್ಯ ವಿಚಾರಿಸಿದರು. ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಕಳೆದ ಒಂದು ತಿಂಗಳಿನಿಂದ ತೀವ್ರ ಅಸ್ವಸ್ಥರಾಗಿರುವ ಹೆಸರಾಂತ ಕವಿ, ನಾಡೋಜ ಡಾ. ಚೆನ್ನವೀರ ಕಣವಿ ಅವರಿಗೆ ಉತ್ತಮ ಚಿಕಿತ್ಸೆ ದೊರೆಯುತ್ತಿದೆ. ಸ್ವಲ್ಪ ಮಟ್ಟಿನ ಚೇತರಿಕೆ ಕಂಡುಬಂದಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಇನ್ನಷ್ಟು ಆರೋಗ್ಯ ಸುಧಾರಿಸುವ ಭರವಸೆಯಿದೆ ಎಂದರು.
ಚನ್ನವೀರ ಕಣವಿ ಅವರ ಕುಟುಂಬದೊಂದಿಗೆ ತಮಗೆ ಧೀರ್ಘಕಾಲದ ಆತ್ಮೀಯ ಒಡನಾಟವಿದೆ. ಸರ್ಕಾರವೇ ಅವರ ಚಿಕಿತ್ಸಾ ವೆಚ್ಚವನ್ನು ಪೂರೈಸುತ್ತಿದ್ದು, ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ ಎಸ್. ಡಿ. ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಶೀಘ್ರ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.
ಮುಖ್ಯಮಂತ್ರಿ @BSBommai ಅವರು ಇಂದು ಧಾರವಾಡದ ಸತ್ತೂರಿನ ಎಸ್.ಡಿ.ಎಂ. ಆಸ್ಪತ್ರೆಗೆ ಭೇಟಿ ನೀಡಿ, ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ ಡಾ. ಚೆನ್ನವೀರ ಕಣವಿ ಅವರ ಆರೋಗ್ಯ ವಿಚಾರಿಸಿದರು.
— CM of Karnataka (@CMofKarnataka) February 13, 2022
ಈ ಸಂದರ್ಭದಲ್ಲಿ ಸಚಿವರಾದ @GovindKarjol ಉಪಸ್ಥಿತರಿದ್ದರು. pic.twitter.com/Lp7mvECLBQ