
ಸಾಂದರ್ಭಿಕ ಚಿತ್ರ
ಬೆಂಗಳೂರು: ನಿಗದಿತ ಮಿತಿಗಿಂತ ಅತೀ ಹೆಚ್ಚು ಶಬ್ದ ಹೊರಡಿಸುವ ಗಂಟೆಗಳ ಬಳಕಗೆ ಸಂಬಂಧಿಸಿ ಬೆಂಗಳೂರು ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ.
ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಡೆಸಿಬಲ್ ಶಬ್ದಕ್ಕಿಂತ ಹೆಚ್ಚಿನ ಶಬ್ದವನ್ನು ಪೊಲೀಸ್ ಠಾಣೆಯಿಂದ ದೊಡ್ಡ ಗಣಪತಿ ದೇವಸ್ಥಾನ ಸಮೂಹಕ್ಕೆ ನೋಟೀಸ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಶಬ್ದದ ಗಂಟೆ ಹೊಡೆಯದಂತೆ ಬಸವನಗುಡಿಯ ದೊಡ್ಡ ಗಣಪತಿ ಸಮೂಹ ದೇವಸ್ಥಾನಗಳ ಕಾರ್ಯನಿರ್ವಹಣಾಧಿಕಾರಿ ಸೂಚನೆ ನೀಡಿದ್ದಾರೆ.
ಸೂಚನೆಯ ಹೊರತಾಗಿಯೂ ಹೆಚ್ಚಿನ ಶಬ್ದ ಬರುವಂತೆ ಗಂಟೆ ಹೊಡೆದಲ್ಲಿ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ಹೇಳಲಾಗಿದೆ. ಢಮರುಗ, ಧ್ವನಿ ವರ್ಧಕ ಯಂತ್ರಗಳಿಂದ ಧ್ವನಿ ಹೊರಡಿಸಬಾರದು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪತ್ರದಂತೆ ಶಬ್ದ ಮಾಲಿನ್ಯ ನಿಯಂತ್ರಣ (ತಿದ್ದುಪಡಿ) ಕಾಯ್ದೆ 2010, ಪರಿಸರ ಸಂರಕ್ಷಣಾ ಕಾಯ್ದೆ 1986ರ ಅನ್ವಯ ನಿಗದಿತ ಡೆಸಿಬಲ್ ಶಬ್ದ ಪ್ರಮಾಣಕ್ಕಿಂತ ಹೆಚ್ಚಿನ ಶಬ್ದ ಮಾಡುವ ಸಂಗೀತ ಸಾಧನಗಳನ್ನು ಬಳಸದಂತೆ ತಿಳಿಸಲಾಗಿದೆ.
ರೆ ದೊಡ್ಡ ಗಣೇಶ ದೇವಸ್ಥಾನ, ಮಿಂಟೋ ಆಂಜನೇಯ ಸ್ವಾಮಿ ದೇವಸ್ಥಾನ, ಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನ, ದೊಡ್ಡ ಬಸವಣ್ಣ ದೇವಸ್ಥಾನ, ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನ ಹಾಗೂ ಇನ್ನಿತರ ದೇವಸ್ಥಾನಗಳು ದೊಡ್ಡ ಗಣೇಶ ಸಮೂಹ ದೇವಸ್ಥಾನಗಳ ಅಡಿ ಬರುತ್ತವೆ.