ವಿಧಾನಸಭೆ ಕಲಾಪ: ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ಮಧ್ಯಂತರ ಆದೇಶ ಜಾರಿಗೆ ಬದ್ಧ ಎಂದ ಸರ್ಕಾರ
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ಆದೇಶವನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಅವರು ಮಂಗಳವಾರ...
Published: 15th February 2022 06:14 PM | Last Updated: 15th February 2022 06:26 PM | A+A A-

ಜೆ. ಸಿ. ಮಾಧುಸ್ವಾಮಿ
ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ಆದೇಶವನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ ಅವರು ಮಂಗಳವಾರ ವಿಧಾನಸಭೆಗೆ ತಿಳಿಸಿದ್ದಾರೆ.
ಇಂದು ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಶಾಸಕ ಮತ್ತು ಪ್ರತಿಪಕ್ಷ ಉಪನಾಯಕ ಯು ಟಿ ಖಾದರ್ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿದ ಮಾಧುಸ್ವಾಮಿ ಅವರು, ನ್ಯಾಯಾಲಯದ ಆದೇಶದ "ಗೊಂದಲ ಮತ್ತು ವ್ಯಾಖ್ಯಾನ" ದ ಬಗ್ಗೆ ಕಳವಳ ವ್ಯಕ್ತಪಡಿಸಿದರು.
ಖಾದರ್ ಪ್ರಸ್ತಾಪಿಸಿದ ವಿಷಯಕ್ಕೆ ಶಿಕ್ಷಣ ಸಚಿವರು ಉತ್ತರ ನೀಡಲಿದ್ದಾರೆ, ಆದರೆ ನ್ಯಾಯಾಲಯದ ಆದೇಶವನ್ನು ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ ಎಂದು ನಾನು ಭರವಸೆ ನೀಡುತ್ತೇನೆ ಎಂದು ಸರ್ಕಾರದ ಪರವಾಗಿ ಮಾಧುಸ್ವಾಮಿ ಹೇಳಿದರು.
ಇದನ್ನು ಓದಿ: 'ನಮಗೆ ನಮ್ಮ ಇಸ್ಲಾಂ ಧರ್ಮ ಮುಖ್ಯ; ಹಿಜಾಬ್ ಬೇಕು, ಶಾಲೆ ಬೇಡ, ಎಕ್ಸಾಂ ಬರೆಯಲ್ಲ': ಹಲವು ಮುಸ್ಲಿಂ ವಿದ್ಯಾರ್ಥಿನಿಯರ ಹಠ
ಈ ವಿಷಯವನ್ನು ಪ್ರಸ್ತಾಪಿಸಿದ ಖಾದರ್, ಹಿಜಾಬ್ ವಿವಾದವನ್ನು ಉಲ್ಲೇಖಿಸಿ, ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿನ ಪರಿಸ್ಥಿತಿ "ನೋವು" ತಂದಿದೆ ಮತ್ತು ಈ ವಿಷಯ ನ್ಯಾಯಾಲಯದ ಮುಂದಿರುವುದರಿಂದ, ವಿವರವಾಗಿ ಮಾತನಾಡಲು ಬಯಸುವುದಿಲ್ಲ ಎಂದರು.
ಆದರೆ ನ್ಯಾಯಾಲಯದ ಆದೇಶದ(ಮಧ್ಯಂತರ ಆದೇಶ) ನಂತರ ನಾನು ಈ ವಿಷಯವನ್ನು ಪ್ರಸ್ತಾಪಿಸುತ್ತಿದ್ದೇನೆ. ಶಿವಮೊಗ್ಗ ಜಿಲ್ಲೆಯ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ 10ನೇ ತರಗತಿಯ ಪೂರ್ವಸಿದ್ಧತಾ ಪರೀಕ್ಷೆ(ಹಿಜಾಬ್ ಧರಿಸಿದ್ದಕ್ಕಾಗಿ) ಬರೆಯಲು ಅವಕಾಶ ನೀಡಿಲ್ಲ ಎಂಬುದನ್ನು ಮಾಧ್ಯಮಗಳಲ್ಲಿ ನೋಡಿದ್ದೇವೆ" ಎಂದರು.
ಇದನ್ನು ಓದಿ: ಹಿಜಾಬ್ ವಿವಾದ ಮಧ್ಯೆ ಮಾಧ್ಯಮಗಳು ಜವಾಬ್ದಾರಿಯುತವಾಗಿ ವರ್ತಿಸಬೇಕು: ಹೈಕೋರ್ಟ್ ಸಿಜೆ ರಿತು ರಾಜ್ ಅವಸ್ತಿ ಮನವಿ
ನ್ಯಾಯಾಲಯದ ಆದೇಶದ ಬಗ್ಗೆ ಮತ್ತು ಕಾನೂನು ಜಾರಿ ಬಗ್ಗೆ ಜನರಲ್ಲಿ ಗೊಂದಲವಿದೆ ಎಂದು ಹೈಕೋರ್ಟ್ ಮಧ್ಯಂತರ ಆದೇಶವನ್ನು ಉಲ್ಲೇಖಿಸಿದ ಖಾದರ್ ಅವರು, ''ಕಾಲೇಜುಗಳಿಗೆ ಸಂಬಂಧಿಸಿದ ನ್ಯಾಯಾಲಯದ ಆದೇಶವನ್ನು ಶಾಲೆಗಳಲ್ಲಿ, ಪ್ರಾಥಮಿಕ ಶಾಲಾ ಹಂತದಲ್ಲಿಯೂ ಸಹ ಜಾರಿಗೊಳಿಸಲಾಗುತ್ತಿದೆ. ಹೀಗಾಗಿ ಗೊಂದಲ ಸೃಷ್ಟಿಯಾಗಿದೆ ಎಂದರು.
ವಿದ್ಯಾರ್ಥಿಗಳ ಡ್ರೆಸ್ ಕೋಡ್ಗೆ ಸಂಬಂಧಿಸಿದ ಆದೇಶವನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ. ಶಿಕ್ಷಕರು ಮತ್ತು ಸಿಬ್ಬಂದಿಗೆ ಸಹ ಹಿಜಾಬ್ ಧರಿಸಲು ಅನುಮತಿ ನೀಡದೆ ಗೊಂದಲ ಸೃಷ್ಟಿಸಲಾಗಿದೆ ಎಂದು ಹೇಳಿದರು.